ADVERTISEMENT

ಮೇವು ಹಗರಣದ ಕೊನೆಯ ಕೇಸಲ್ಲೂ ಲಾಲುಗೆ ಜಾಮೀನು

ಪಿಟಿಐ
Published 17 ಏಪ್ರಿಲ್ 2021, 11:49 IST
Last Updated 17 ಏಪ್ರಿಲ್ 2021, 11:49 IST
ಲಾಲು ಪ್ರಸಾದ್‌
ಲಾಲು ಪ್ರಸಾದ್‌   

ರಾಂಚಿ: ಬಹುಕೋಟಿ ಮೇವು ಹಗರಣ ಕುರಿತ ದುಮ್ಕಾ ಖಜಾನೆ ಪ್ರಕರಣದಲ್ಲಿ ಜಾರ್ಖಂಡ್‌ ಹೈಕೋರ್ಟ್‌ ಶನಿವಾರ ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಅವರಿಗೆ ಜಾಮೀನು ನೀಡಿದೆ.

ನ್ಯಾಯಮೂರ್ತಿ ಅಪರೇಶ್‌ ಕುಮಾರ್‌ ಸಿಂಗ್‌ ಜಾಮೀನು ನೀಡಿದ್ದು, ಇದು ಲಾಲು ಪ್ರಸಾದ್ ಜೈಲಿನಿಂದ ಹೊರಬರುವ ಹಾದಿಯನ್ನು ಸುಗಮಗೊಳಿಸಿದೆ.

ಜಾಮೀನು ಅವಧಿಯಲ್ಲಿ ಅನುಮತಿಯಿಲ್ಲದೇ ದೇಶ ಬಿಟ್ಟು ತೆರಳಬಾರದು. ವಿಳಾಸ ಅಥವಾ ಮೊಬೈಲ್ ಸಂಖ್ಯೆ ಬದಲಿಸಬಾರದು ಎಂದು ಕೋರ್ಟ್‌ ಸೂಚಿಸಿದೆ. ಇದೇ ಬಹುಕೋಟಿ ಮೇವು ಹಗರಣಕ್ಕೆ ಸಂಬಂಧಿಸಿದಂತೆ ಇತರೆ ಮೂರು ಪ್ರಕರಣದಲ್ಲಿ ಅವರು ಈಗಾಗಲೇ ಜಾಮೀನು ಪಡೆದಿದ್ದರು. ದುಮ್ಕಾ ಖಜಾನೆಯಿಂದ 90ರ ದಶಕದಲ್ಲಿ ಕಾನೂನುಬಾಹಿರವಾಗಿ ₹ 3.13 ಕೋಟಿ ಪಡೆದಿದ್ದ ಸಂಬಂಧ ಪ್ರಕರಣ ನ್ಯಾಯಾಲಯದಲ್ಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.