ನವದೆಹಲಿ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ.ನಡ್ಡಾ ಆಯ್ಕೆ ಬಹುತೇಕ ಖಚಿತವಾಗಿದ್ದು, ಮುಂದಿನ ವಾರ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಹೊಸ ಅಧ್ಯಕ್ಷ ಚುನಾವಣೆಯ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು. ಸದ್ಯ ಪಕ್ಷದ ಕಾರ್ಯಾಧ್ಯಕ್ಷರಾಗಿರುವ ನಡ್ಡಾ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿರುವ ಮೂಲಗಳು ಈ ಕುರಿತು ಜನವರಿ 20 ರಂದು ಔಪಚಾರಿಕ ಪ್ರಕಟಣೆ ನೀಡಲಾಗುವುದು ಎಂದು ತಿಳಿಸಿವೆ.
ಕಳೆದ ವರ್ಷದ ಜುಲೈನಲ್ಲಿ ನಡ್ಡಾ ಅವರು ಪಕ್ಷದ ಕಾರ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು. ಗೃಹ ಸಚಿವರಾಗಿರುವ ಅಮಿತ್ ಶಾ ಅಧ್ಯಕ್ಷರಾಗಿ ಮುಂದುವರಿದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.