ADVERTISEMENT

ದೆಹಲಿ: ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್‌ ಏಮ್ಸ್‌ಗೆ ದಾಖಲು

ಪಿಟಿಐ
Published 12 ಜನವರಿ 2026, 12:46 IST
Last Updated 12 ಜನವರಿ 2026, 12:46 IST
<div class="paragraphs"><p>ಜಗದೀಪ್ ಧನಕರ್‌</p></div>

ಜಗದೀಪ್ ಧನಕರ್‌

   

(ಪಿಟಿಐ ಚಿತ್ರ)

ನವದೆಹಲಿ: ಮಾಜಿ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರ ಆರೋಗ್ಯದಲ್ಲಿ ಏರುಪೇರಾಗಿರುವ ಕಾರಣ ಅವರನ್ನು ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ(ಎಐಐಎಂಎಸ್‌) ಸೋಮವಾರ ದಾಖಲಿಸಲಾಗಿದೆ.

ADVERTISEMENT

‘74 ವರ್ಷದ ಧನಕರ್ ಅವರು ಜನವರಿ 10ರಂದು ಎರಡು ಬಾರಿ ಪ್ರಜ್ಞೆ ತಪ್ಪಿದ್ದರು. ವೈದ್ಯಕೀಯ ಪರೀಕ್ಷೆಗಾಗಿ ಅವರನ್ನು ಸೋಮವಾರ ಆಸ್ಪತ್ರೆಗೆ ಕರೆತರಲಾಗಿತ್ತು. ವೈದ್ಯರ ಸೂಚನೆಯಂತೆ ಅವರನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಳೆದ ವರ್ಷ ಜುಲೈ 21ರಂದು ಆರೋಗ್ಯ ಕಾರಣ ನೀಡಿ ಧನಕರ್ ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದು ರಾಜಕೀಯ ವಲಯದಲ್ಲಿ ವಿವಾದ ಹಾಗೂ ಚರ್ಚೆಗೆ ಗ್ರಾಸವಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.