ಜಗದೀಪ್ ಧನಕರ್
(ಪಿಟಿಐ ಚಿತ್ರ)
ನವದೆಹಲಿ: ಮಾಜಿ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗಾಗಿ ಬೀಳ್ಕೊಡುಗೆ ಸಮಾರಂಭ ಆಯೋಜಿಸಬೇಕು ಎಂದು ಬುಧವಾರ ಸಂಜೆ ನಡೆದಿದ್ದ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಒತ್ತಾಯಿಸಿದ್ದಾರೆ. ಆದರೆ, ಕೇಂದ್ರ ಸರ್ಕಾರ ಇದಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ತಿಳಿದುಬಂದಿದೆ.
‘ಸಭೆಯಲ್ಲಿ ಕೇಂದ್ರ ಸಚಿವ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಸಚಿವ ಕಿರಣ್ ರಿಜಿಜು ಹಾಜರಿದ್ದರು. ಆದರೆ, ರಮೇಶ್ ಅವರು ಪ್ರಸ್ತಾಪಿಸಿದ ವಿಚಾರಕ್ಕೆ ಸಂಬಂಧಿಸಿ ಈ ಇಬ್ಬರೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ’ ಎಂದು ಮೂಲಗಳು ಹೇಳಿವೆ. ‘ಜೊತೆಗೆ, ವಿರೋಧ ಪಕ್ಷಗಳ ಇತರೆ ಯಾವ ನಾಯಕರೂ ರಮೇಶ್ ಅವರ ಪ್ರಸ್ತಾವವನ್ನು ಬೆಂಬಲಿಸಲಿಲ್ಲ’ ಎಂದೂ ತಿಳಿಸಿವೆ.
ರಾಜ್ಯಸಭೆಯ ಒಟ್ಟು ಆರು ಸದಸ್ಯರಿಗೆ ಗುರುವಾರ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.