ನವದೆಹಲಿ: ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಕಳೆದ ತಿಂಗಳು ರಾಜೀನಾಮೆ ನೀಡಿದ ಬಳಿಕ ‘ಕಾಣೆಯಾಗಿರುವ’ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಸೋಮವಾರ ಕಳವಳ ವ್ಯಕ್ತಪಡಿಸಿದ್ದಾರೆ.
ಮಾಜಿ ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಇತ್ತೀಚೆಗೆ ದೆಹಲಿಗೆ ಆಗಮಿಸಿದ್ದರು. ಈ ವೇಳೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, 45 ನಿಮಿಷ ಮಾತುಕತೆ ನಡೆಸಿದ್ದಾರೆ. ಈ ಭೇಟಿಯ ಕುರಿತೂ ರಮೇಶ್ ಪ್ರಶ್ನೆ ಎತ್ತಿದ್ದಾರೆ.
‘ಮಾಜಿ ರಾಷ್ಟ್ರಪತಿ ಧನಕರ್ ಅವರು ಜುಲೈ 21ರಿಂದ ಕಾಣೆಯಾಗಿದ್ದಾರೆ. ಅವರ ಬಗ್ಗೆ ಯಾವ ಮಾಹಿತಿಯನ್ನು ಕೇಳಿಲ್ಲ, ಓದಿಲ್ಲ, ಅವರನ್ನು ನೋಡಿಲ್ಲ. ತೆಲುಗು ಮಾಧ್ಯಮದ ಪ್ರಕಾರ, ವೆಂಕಯ್ಯ ನಾಯ್ಡು ಅವರು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಏನು ನಡೆಯುತ್ತಿದೆ ಇಲ್ಲಿ’ ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.