ADVERTISEMENT

ಧನಕರ್‌ಗೆ RSS, BJP ಬಗ್ಗೆ ನಿಷ್ಠೆ ಇತ್ತು, ಆದರೆ… ರಾಜೀನಾಮೆ ಬಗ್ಗೆ ಖರ್ಗೆ ಸಂಶಯ

ಪಿಟಿಐ
Published 23 ಜುಲೈ 2025, 6:14 IST
Last Updated 23 ಜುಲೈ 2025, 6:14 IST
<div class="paragraphs"><p>ಮಲ್ಲಿಕಾರ್ಜುನ ಖರ್ಗೆ</p></div>

ಮಲ್ಲಿಕಾರ್ಜುನ ಖರ್ಗೆ

   

ನವದೆಹಲಿ: ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನಕರ್ ಅವರು ಯಾಕೆ ರಾಜೀನಾಮೆ ನೀಡಿದರು ಎಂದು ಸರ್ಕಾರವೇ ತಿಳಿಸಬೇಕು ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ಅವರ, ಧನಕರ್ ರಾಜೀನಾಮೆಗೆ ಕಾರಣವೇನು? ಇದರಲ್ಲಿ ಏನೋ ಸಂಶಯ ಮೂಡಿಸುವಂತಿದೆ ಎಂದು ಅವರು ಶಂಕೆ ವ್ಯಕ್ತಪಡಿಸಿದ್ದಾರೆ.

ADVERTISEMENT

ಅವರ ಆರೋಗ್ಯ ಚೆನ್ನಾಗಿಯೇ ಇತ್ತು. ಆದರೆ ಏಕಾಏಕಿ ಏನಾಯಿತು? ಖುದ್ದು ಆರ್‌ಎಸ್‌ಎಸ್‌, ಬಿಜೆಪಿಯವರಿಗಿಂತಲೂ ಹೆಚ್ಚಾಗಿ ಅವರನ್ನು ಧನಕರ್ ಸಮರ್ಥಿಸಿಕೊಳ್ಳುತ್ತಿದ್ದರು. ಆರ್‌ಎಸ್‌ಎಸ್‌, ಬಿಜೆಪಿ ಬಗ್ಗೆ ಅವರಿಗೆ ನಿಷ್ಠೆ ಇತ್ತು. ಅವರ ರಾಜೀನಾಮೆ ಹಿಂದಿನ ಕಾರಣ ಏನು? ಯಾರಿದ್ದಾರೆ? ಎನ್ನುವುದನ್ನು ದೇಶದ ಜನರಿಗೆ ತಿಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇತಿಹಾಸದ ಬಗ್ಗೆ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ‘ಆರ್‌ಎಸ್‌ಎಸ್‌ ಇತಿಹಾಸವನ್ನು ತಿರುಚಲು ಯತ್ನಿಸುತ್ತಿದೆ. ಜವಹರಲಾಲ್ ನೆಹರು ಬರೆದ ಡಿಸ್ಕವರಿ ಆಫ್ ಇಂಡಿಯಾ ಪುಸ್ತಕವನ್ನು ಅವರು ತಿರಸ್ಕರಿಸುತ್ತಾರೆ. ಭಾರತ ಹಾಗೂ ಆರ್‌ಎಸ್‌ಎಸ್‌ಗೆ ಪತ್ಯೇಕ ಇತಿಹಾಸ ಇದೆ’ ಎಂದು ಅವರು ನುಡಿದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.