ಬೆಂಗಳೂರು: ಜಗದೀಪ್ ಧನಕರ್ ರಾಜೀನಾಮೆಯಿಂದಾಗಿ ತೆರವಾಗುವ ಉಪರಾಷ್ಟ್ರಪತಿ ಹುದ್ದೆಗೆ ಯಾರು ಆಯ್ಕೆಯಾಗಲಿದ್ದಾರೆ ಎಂಬ ಚರ್ಚೆ ಆರಂಭವಾಗಿದೆ.
ರಾಜ್ಯಸಭಾ ಉಪ ಸಭಾಪತಿಯೂ ಆದ ಜನತಾದಳ (ಯುನೈಟೆಡ್) ಸಂಸದ ಹರಿವಂಶ್ ಅವರು 2020ರಿಂದ ಉಪ ಸಭಾಪತಿ ಸ್ಥಾನದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಸರ್ಕಾರದ ವಿಶ್ವಾಸವನ್ನು ಗಳಿಸಿದ್ದಾರೆ. ಈ ಕಾರಣಕ್ಕೆ ಅವರು ಸಂಭಾವ್ಯ ಅಭ್ಯರ್ಥಿಯಾಗಿದ್ದಾರೆ.
‘ಮುಂದಿನ ಉಪರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ನಡೆದಿದೆ. ಉತ್ತಮ ಘನತೆಯುಳ್ಳ ಹಾಗೂ ವಿವಾದಾತ್ಮಕ ವಲ್ಲದ ವ್ಯಕ್ತಿಯನ್ನು ಪಕ್ಷವು ಆಯ್ಕೆ ಮಾಡಲಿದೆಯೆಂದು ನಂಬಿದ್ದೇನೆ’ ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.
ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ವೈದ್ಯಕೀಯ ಕಾರಣಗಳನ್ನು ನೀಡಿ ಸೋಮವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.
74 ವರ್ಷದ ಧನಕರ್ ಅವರು 2022ರ ಆಗಸ್ಟ್‌ನಲ್ಲಿ ಅಧಿಕಾರ ವಹಿಸಿಕೊಂಡಿದ್ದರು. ಅವರ ಅಧಿಕಾರದ ಅವಧಿ 2027ರ ವರೆಗೂ ಇತ್ತು. ರಾಜ್ಯಸಭೆಯ ಸಭಾಪತಿಯೂ ಆಗಿರುವ ಅವರು ಸೋಮವಾರ ಆರಂಭವಾದ ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನ ಕಲಾಪದಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.