ADVERTISEMENT

ಅಬಕಾರಿ ನೀತಿ ಹಗರಣ: ಸತ್ಯೇಂದ್ರ ಜೈನ್‌ಗೆ ಜಾಮೀನು ನಿರಾಕರಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಏಪ್ರಿಲ್ 2023, 6:33 IST
Last Updated 6 ಏಪ್ರಿಲ್ 2023, 6:33 IST
ಸತ್ಯೇಂದ್ರ ಜೈನ್‌
ಸತ್ಯೇಂದ್ರ ಜೈನ್‌   

ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಎಎಪಿ ನಾಯಕ ಹಾಗೂ ಮಾಜಿ ಸಚಿವ ಸತ್ಯೇಂದ್ರ ಜೈನ್‌ಗೆ ದೆಹಲಿ ಹೈಕೋರ್ಟ್‌ ಜಾಮೀನು ನಿರಾಕರಿಸಿದೆ.

ಸತ್ಯೇಂದ್ರ ಜೈನ್‌ ಪರ ವಕೀಲರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಜಾಮೀನು ಅರ್ಜಿಯಲ್ಲಿ ಸತ್ಯೇಂದರ್ ಜೈನ್ ಅವರು ಎಲ್ಲಾ ಸಂದರ್ಭಗಳಲ್ಲಿ ಜಾರಿ ನಿರ್ದೇಶನಾಲಯದೊಂದಿಗೆ ಸಹಕರಿಸಿದ್ದಾರೆ. ಹಾಗೂ ಸತ್ಯೇಂದ್ರ ಜೈನ್‌ ಅವರ ಆದಾಯವನ್ನು ತಪ್ಪಾಗಿ ಗುರುತಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಜಾಮೀನು ನೀಡಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ಸತ್ಯೇಂದ್ರ ಜೈನ್‌ ಅವರ ಆದಾಯವನ್ನು ತಪ್ಪಾಗಿ ಗುರುತಿಸಿಲ್ಲ, ಅವರು ಪ್ರಭಾವಿ ವ್ಯಕ್ತಿಯಾಗಿದ್ದು, ಸಾಕ್ಷ್ಯಗಳನ್ನು ತಿರುಚಬಹುದು ಆಗಾಗಿ ಅವರಿಗೆ ಜಾಮೀನು ನೀಡಬಾರದು ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ADVERTISEMENT

ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಕ್ಕೆ ಸಂಬಂಧಿಸಿದಂತೆ ಜೈನ್‌ ಅವರು 2022 ಮೇ 20ರಿಂದ ತಿಹಾರ್‌ ಜೈಲಿನಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.