ಬಂಧನ
(ಸಾಂದರ್ಭಿಕ ಚಿತ್ರ)
ಸಿಂಗೋಲಿ (ಮಧ್ಯಪ್ರದೇಶ): ಜೈನ ಮುನಿಗಳ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಬಾಲಕ ಸೇರಿ ಆರು ಜನರನ್ನು ಪೊಲೀಸರು ಬಂಧಿಸಿದ ಘಟನೆ ಮಧ್ಯಪ್ರದೇಶದ ಸಿಂಗೋಲಿ ನಗರದಲ್ಲಿ ನಡೆದಿದೆ.
‘ಆರೋಪಿಗಳನ್ನು ರಾಜಸ್ಥಾನ ಮೂಲದವರು ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ ಜೈನ ಮುನಿಗಳು ನಗರದಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಹನುಮಾನ್ ದೇಗುಲದ ಬಳಿ ಬೈಕ್‌ನಲ್ಲಿ ಬಂದ ಯುವಕರು ಮುನಿಗಳನ್ನು ತಡೆದು, ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ. ಬಳಿಕ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಮೂವರು ಮುನಿಗಳಿಗೆ ತಲೆ ಮತ್ತು ಬೆನ್ನಿಗೆ ಗಾಯಗಳಾಗಿವೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಜೈನ ಸಮುದಾಯದವರು ಮುನ್ನಡೆಸುವ ಆಸ್ಪತ್ರೆಗೆ ಅವರನ್ನು ದಾಖಲಿಸಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿಗಳನ್ನು ವಶಕ್ಕೆ ಪಡೆದು ಭಾರತೀಯ ನ್ಯಾಯ ಸಂಹಿತೆಯಡಿ ಪ್ರಕರಣ ದಾಖಲಿಸಲಾಗಿದೆ.
ಮುನಿಗಳ ಮೇಲೆ ಹಲ್ಲೆ ನಡೆದ ಹಿನ್ನೆಲೆ ಸಮುದಾಯದವರು ಆಕ್ರೋಶ ವ್ಯಕ್ತಪಡಿಸಿದ್ದು, ಸಿಂಗೋಲಿ ನಗರದಲ್ಲಿ ಬಂದ್ ಆಚರಿಸಿದ್ದಾರೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಸ್ಥಳೀಯ ಪೊಲೀಸ್ ವರಿಷ್ಠಾಧಿಕಾರಿ ಅಂಕಿತ್ ಜೈಸ್ವಾಲ್ ಪಿಟಿಐಗೆ ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.