ADVERTISEMENT

ಜೈಪುರ: 300 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಬಾಲಕನ ರಕ್ಷಣೆ

ಪಿಟಿಐ
Published 20 ಮೇ 2023, 10:46 IST
Last Updated 20 ಮೇ 2023, 10:46 IST
ಕೊಳವೆ ಬಾವಿಯಲ್ಲಿ ಸಿಲುಕಿಕೊಂಡಿದ್ದ ಬಾಲಕ ಅಕ್ಷಿತ್‌(ಥTwitter/@NDRFHQ)
ಕೊಳವೆ ಬಾವಿಯಲ್ಲಿ ಸಿಲುಕಿಕೊಂಡಿದ್ದ ಬಾಲಕ ಅಕ್ಷಿತ್‌(ಥTwitter/@NDRFHQ)   

ಜೈಪುರ: ಸತತ ಏಳು ಗಂಟೆಗಳ ಕಾರ್ಯಾಚರಣೆ ಬಳಿಕ ಸುಮಾರು 300 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಒಂಭತ್ತು ವರ್ಷದ ಬಾಲಕನನ್ನು ರಕ್ಷಿಸುವಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಯಶಸ್ವಿಯಾಗಿದೆ.

ರಾಜಸ್ಥಾನದ ಭೋಜಪುರ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಆಟವಾಡುತ್ತಿರುವ ವೇಳೆ ಅಕ್ಷಿತ್‌ ಆಯತಪ್ಪಿ ಕೊಳವೆ ಬಾವಿಗೆ ಬಿದ್ದಿದ್ದಾನೆ. ಕೊಳವೆ ಬಾವಿ ಸುಮಾರು 300 ಅಡಿ ಆಳವಿದ್ದು, ಬಾಲಕ ಅಕ್ಷಿತ್‌ ಸುಮಾರು 90 ಅಡಿ ಆಳದಲ್ಲಿ ಸಿಕ್ಕಿಬಿದ್ದಿದ್ದನು.

ಅಕ್ಷಿತ್ ಅಪಾಯದಲ್ಲಿರುವ ವಿಷಯವನ್ನು ಆತನ ಸ್ನೇಹಿತರು ಗ್ರಾಮಸ್ಥರಿಗೆ ತಿಳಿಸಿದ್ದು, ಗ್ರಾಮಸ್ಥರು ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌ ಮತ್ತು ಸಿವಿಲ್‌ ಡಿಫೆನ್ಸ್‌) ಬಾಲಕನ ರಕ್ಷಣೆಗೆ ಕಾರ್ಯಪ್ರವೃತ್ತರಾಗಿದ್ದಾರೆ.

ADVERTISEMENT

’ಸುಮಾರು ಏಳು ಗಂಟೆಗಳ ಸತತ ಕಾರ್ಯಾಚರಣೆಯ ನಂತರ ಬಾಲಕನನ್ನು ಸುರಕ್ಷಿತವಾಗಿ ಕೊಳವೆ ಬಾಯಿಯಿಂದ ರಕ್ಷಿಸಲಾಗಿದೆ. ಕಾರ್ಯಾಚರಣೆ ವೇಳೆ ಅಕ್ಷಿತ್‌ ರಕ್ಷಣಾ ಪಡೆಗಳ ಜೊತೆ ಮಾತನಾಡುತ್ತಿದ್ದನು. ತನಗೆ ಆಮ್ಲಜನಕ, ನೀರು, ಬಿಸ್ಕೆಟ್‌ ಕೊಡುವಂತೆ ಕೇಳಿದ್ದನು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

'ರಕ್ಷಣಾ ತಂಡದ ಪ್ರಯತ್ನದಿಂದ ಬಾಲಕನನ್ನು ರಕ್ಷಿಸಲಾಗಿದೆ. ಬಾಲಕನ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಚಿಕಿತ್ಸೆಗಾಗಿ ಜಾಬ್ನರ್‌ನ ಆಸ್ಪತ್ರೆಗೆ ಸೇರಿಸಲಾಗಿದೆ’ ಎಂದು ಎಸ್‌ಡಿಎಂ ಅರುಣ್ ಜೈನ್ ಹೇಳಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಸಚಿವ ಲಾಲ್‌ಚಂದ್ ಕಟಾರಿಯ ಬಾಲಕನ ಕುಟುಂಬಕ್ಕೆ ಧೈರ್ಯ ಹೇಳಿ, ಬಾಲಕನ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.