ನವದೆಹಲಿ: ಜೈಪುರದ ಸವಾಯಿ ಮಾನ್ ಸಿಂಗ್ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ಅವಘಡದ ಕುರಿತು ತನಿಖೆ ಮಾಡಬೇಕು ಹಾಗೂ ರಾಜಸ್ಥಾನ ಸರ್ಕಾರವು ಸಂತ್ರಸ್ತ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಆಗ್ರಹಿಸಿದ್ದಾರೆ.
ಭಾನುವಾರ ತಡರಾತ್ರಿ ಸವಾಯಿ ಮಾನ್ ಸಿಂಗ್ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 6 ರೋಗಿಗಳು ಸಜೀವ ದಹನವಾಗಿದ್ದರು.
ಬೆಂಕಿ ಅವಘಡದಲ್ಲಿ ರೋಗಿಗಳು ಮೃತಪಟ್ಟಿರುವುದು ದುಃಖಕರ ಸಂಗತಿ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ‘ಎಕ್ಸ್’ನಲ್ಲಿ ಪ್ರಿಯಾಂಕಾ ಗಾಂಧಿ ಅವರು ಪೋಸ್ಟ್ ಮಾಡಿದ್ದಾರೆ.
ಶಾರ್ಟ್ ಸರ್ಕ್ಯೂಟ್‌ನಿಂದ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.