ADVERTISEMENT

ಜೈಷ್‌ ಉಗ್ರ ಸಂಘಟನೆಯ ಅಡಗುತಾಣದ ಮೇಲೆ ದಾಳಿ: 6 ಮಂದಿ ಬಂಧನ

ಪಿಟಿಐ
Published 3 ಫೆಬ್ರುವರಿ 2023, 14:16 IST
Last Updated 3 ಫೆಬ್ರುವರಿ 2023, 14:16 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಭದ್ರತಾ ಪಡೆ ಯೋಧರು ಶುಕ್ರವಾರ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಜೈಷ್- ಇ-ಮೊಹಮ್ಮದ್ ಉಗ್ರ ಸಂಘಟನೆ ಸೇರಿದ ಆರು ಮಂದಿ ಉಗ್ರರನ್ನು ಬಂಧಿಸಿದ್ದಾರೆ. ಇದೇ ವೇಳೆ ಉಗ್ರರ ಅಡಗುತಾಣವನ್ನು ಪತ್ತೆ ಮಾಡಿ ಅವುಗಳನ್ನು ತೆರವುಗೊಳಿಸಿ, ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೀರ್‌ಹಾಮ ಮತ್ತು ದಮ್ಹಾಲ್‌ ಹಂಜಿಪೊರಾ ಪ್ರದೇಶಗಳಲ್ಲಿ ನಡೆಯುತ್ತಿದ್ದ ಉಗ್ರ ಚಟುವಟಿಕೆ ಕುರಿತು ಖಚಿತ ಮಾಹಿತಿ ಲಭ್ಯವಾಗಿತ್ತು. ಇದರ ಆಧಾರದ ಮೇಲೆ ಪೊಲೀಸ್ ಮತ್ತು ಸೇನೆ ಜಂಟಿ ಕಾರ್ಯಾಚರಣೆ ನಡೆಸಿತು. ಬಂಧಿತರಿಂದ ಎಂಟು ಮ್ಯಾಗಜಿನ್‌, ಎಂ4 ಪಿಸ್ತೂಲ್‌ಗಳು, ಮದ್ದುಗುಂಡುಗಳು ಸೇರಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

‘ಬಂಧಿತರು ವಿವಿಧ ಸಾಮಾಜಿಕ ಜಾಲತಾಣಗಳ ಮೂಲಕ ಗಡಿಯಾಚೆಗಿನ ಉಗ್ರರೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ’ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.