ನವದೆಹಲಿ: ಸೆಮಿಕಂಡಕ್ಟರ್, ಪರಿಸರ ಸ್ನೇಹಿ ಇಂಧನ, ರಕ್ಷಣೆ ಹಾಗೂ ಕೃತಕ ಬುದ್ದಿಮತ್ತೆ (ಎಐ) ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರ ಮತ್ತು ಪಾಲುದಾರಿಕೆಯನ್ನು ಹೆಚ್ಚಿಸಿಕೊಳ್ಳಲು ಭಾರತ– ದಕ್ಷಿಣ ಕೊರಿಯಾ ಶನಿವಾರ ನಿರ್ಧರಿಸಿವೆ.
ದಕ್ಷಿಣ ಕೊರಿಯಾದ ವಿದೇಶಾಂಗ ವ್ಯವಹಾರ ಸಚಿವರಾದ ಚೋ ಹಯೂನ್ ಹಾಗೂ ಭಾರತದ ವಿದೇಶಾಂಗ ವ್ಯವಹಾರ ಸಚಿವ ಎಸ್. ಜೈಶಂಕರ್ ನಡುವೆ ದ್ವಿಪಕ್ಷೀಯ ಬಾಂಧವ್ಯ ಮತ್ತು ಸಹಕಾರವನ್ನು ಮತ್ತಷ್ಟು ಹೆಚ್ಚಿಸುವುದಕ್ಕೆ ಸಂಬಂಧಿಸಿದಂತೆ ನವದೆಹಲಿಯಲ್ಲಿ ಮಾತುಕತೆ ನಡೆಯಿತು.
‘ವ್ಯಾಪಾರ, ಉತ್ಪಾದನೆ ಹಾಗೂ ಕಡಲಿಗೆ ಸಂಬಂಧಿಸಿದ ಕ್ಷೇತ್ರದಲ್ಲೂ ಹೊಸ ಸಾಧ್ಯತೆಗಳನ್ನು ಬಳಸಿಕೊಳ್ಳಲು ದ್ವಿಪಕ್ಷೀಯ ಸಹಕಾರವನ್ನು ಮುಂದುವರಿಸುವ ಕುರಿತಂತೆ ಫಲಪ್ರದಾಯಕ ಚರ್ಚೆ’ ನಡೆಸಲಾಯಿತು ಎಂದು ಜೈಶಂಕರ್ ‘ಎಕ್ಸ್’ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.