ADVERTISEMENT

ವಿದೇಶಾಂಗ ಸಚಿವರ ಸಭೆ: ನಾಳೆ ದಕ್ಷಿಣ ಆಫ್ರಿಕಾಕ್ಕೆ ಜೈಶಂಕರ್ ಭೇಟಿ

ಪಿಟಿಐ
Published 19 ಫೆಬ್ರುವರಿ 2025, 7:17 IST
Last Updated 19 ಫೆಬ್ರುವರಿ 2025, 7:17 IST
<div class="paragraphs"><p>ಜೈಶಂಕರ್</p></div>

ಜೈಶಂಕರ್

   

ನವದೆಹಲಿ: ಜಿ–20 ರಾಷ್ಟ್ರಗಳ ವಿದೇಶಾಂಗ ಸಚಿವರ ಸಭೆಯಲ್ಲಿ ಪಾಲ್ಗೊಳ್ಳಲು ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್ ಅವರು ಫೆಬ್ರುವರಿ 20ರಿಂದ ದಕ್ಷಿಣ ಆಫ್ರಿಕಾಕ್ಕೆ ಎರಡು ದಿನಗಳ ಭೇಟಿ ನೀಡಲಿದ್ದಾರೆ.

ಸಭೆಯ ನಂತರ ಕೆಲ ದೇಶಗಳ ಸಚಿವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸುವ ಸಾಧ್ಯತೆಯಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ(ಎಂಇಎ) ತಿಳಿಸಿದೆ.

ADVERTISEMENT

‘ದಕ್ಷಿಣ ಆಫ್ರಿಕಾದ ಸಚಿವ ರೊನಾಲ್ಡ್ ಲಾಮೊಲಾ ಅವರ ಆಹ್ವಾನದ ಮೇರೆಗೆ ಸಚಿವ ಡಾ. ಎಸ್‌.ಜೈಶಂಕರ್ ಅವರು ಫೆಬ್ರುವರಿ 20 ಮತ್ತು 21ರಂದು ದಕ್ಷಿಣ ಆಫ್ರಿಕಾದ ಜೊಹಾನ್ಸ್‌ಬರ್ಗ್‌ಗೆ ಭೇಟಿ ನೀಡಲಿದ್ದು, ಜಿ– 20 ರಾಷ್ಟ್ರಗಳ ವಿದೇಶಾಂಗ ಸಚಿವರ ಸಭೆಯಲ್ಲಿ ಭಾಗವಹಿಸಲಿದ್ದಾರೆ’ ಎಂದು ಎಂಇಎ ಹೇಳಿಕೆಯಲ್ಲಿ ತಿಳಿಸಿದೆ.

ಜಿ–20 ದೇಶಗಳೊಂದಿಗೆ ಭಾರತದ ಸಂಬಂಧವನ್ನು ಬಲಪಡಿಸಲು ಈ ವೇದಿಕೆ ಸಹಕಾರಿಯಾಗಿದೆ ಎಂದು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.