ADVERTISEMENT

ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್‌ಗೆ ಕೋವಿಡ್

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2020, 10:16 IST
Last Updated 20 ಆಗಸ್ಟ್ 2020, 10:16 IST
ಗಜೇಂದ್ರ ಸಿಂಗ್ ಶೇಖಾವತ್‌
ಗಜೇಂದ್ರ ಸಿಂಗ್ ಶೇಖಾವತ್‌   

ನವದೆಹಲಿ: ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್‌ಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.

ಕೋವಿಡ್ ರೋಗ ಲಕ್ಷಣಗಳು ಕಂಡು ಬಂದ ಕಾರಣ ಪರೀಕ್ಷೆ ನಡೆಸಿದ್ದು, ರೋಗ ಇರುವುದು ದೃಢಪಟ್ಟಿದೆ ಎಂದು ಶೇಖಾವತ್ ಗುರುವಾರ ಟ್ವೀಟ್ ಮಾಡಿದ್ದಾರೆ.

ಕೋವಿಡ್ ದೃಢಪಟ್ಟಿದೆ.ವೈದ್ಯರ ಸಲಹೆಯಂತೆ ನಾನು ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳ ಹಿಂದೆ ನನ್ನ ಸಂಪರ್ಕಕ್ಕೆ ಬಂದಿರುವವರು ಇತರರ ಸಂಪರ್ಕಕ್ಕೆ ಬರದೆನಿಮ್ಮ ಆರೋಗ್ಯ ನೋಡಿಕೊಳ್ಳಿ.ರೋಗ ಇದೆಯೇ ಎಂದು ಪರೀಕ್ಷಿಸಿಕೊಳ್ಳಿ. ಎಲ್ಲರೂ ಆರೋಗ್ಯದಿಂದಿರಿ ಮತ್ತು ಕಾಳಜಿ ವಹಿಸಿ ಎಂದು ಶೆಖಾವತ್ ಟ್ವೀಟಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.