ADVERTISEMENT

Jamia Protest: ವಿದ್ಯಾರ್ಥಿಗಳ ಅಮಾನತು ಆದೇಶಕ್ಕೆ ದೆಹಲಿ ಹೈಕೋರ್ಟ್ ತಡೆ ​​

ಪಿಟಿಐ
Published 4 ಮಾರ್ಚ್ 2025, 7:40 IST
Last Updated 4 ಮಾರ್ಚ್ 2025, 7:40 IST
<div class="paragraphs"><p>ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯ</p></div>

ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯ

   

(ಪಿಟಿಐ ಚಿತ್ರ)

ನವದೆಹಲಿ: ಪೂರ್ವಾನುಮತಿ ಇಲ್ಲದೇ ಕ್ಯಾಂಪಸ್‌ನಲ್ಲಿ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಹಲವಾರು ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿರುವ ಜಾಮಿಯಾ ಮಿಲಿಯಾ ಇಸ್ಲಾಮಿಯಾ(ಜೆಎಂಐ) ವಿಶ್ವವಿದ್ಯಾಲಯದ ಆದೇಶಕ್ಕೆ ದೆಹಲಿ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ.

ADVERTISEMENT

ಈ ಸಮಸ್ಯೆಯನ್ನು ಪರಿಹರಿಸಲು ಕುಲಪತಿಗಳ ಮೇಲ್ವಿಚಾರಣೆಯಲ್ಲಿ ವಿಶ್ವವಿದ್ಯಾಲಯ ಅಧಿಕಾರಿಗಳ ಸಮಿತಿಯನ್ನು ರಚಿಸುವಂತೆ ಹೈಕೋರ್ಟ್ ಆದೇಶಿಸಿದೆ. ಅಲ್ಲದೇ ಚರ್ಚೆಯಲ್ಲಿ ವಿದ್ಯಾರ್ಥಿ ಪ್ರತಿನಿಧಿಗಳು ಸಹ ಭಾಗವಹಿಸಬೇಕು ಎಂದು ಹೇಳಿದೆ.

ಈ ಸಂಬಂಧ ವರದಿ ಸಲ್ಲಿಸುವಂತೆ ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ವಿಶ್ವವಿದ್ಯಾಲಯಕ್ಕೆ ಸೂಚಿಸಿದ್ದಾರೆ.

ಜಾಮಿಯಾ ವಿಶ್ವವಿದ್ಯಾಲಯದ ನಾಲ್ವರು ವಿದ್ಯಾರ್ಥಿಗಳು ತಮ್ಮನ್ನು ಅಮಾನತುಗೊಳಿಸಿ ಕ್ಯಾಂಪಸ್‌ಗೆ ಪ್ರವೇಶಿಸುವುದನ್ನು ನಿಷೇಧಿಸಿದ ವಿಶ್ವವಿದ್ಯಾಲಯದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು.

ವಾದ ಮಂಡಿಸಿದ ವಿದ್ಯಾರ್ಥಿಗಳ ಪರ ವಕೀಲರು, ವಿದ್ಯಾರ್ಥಿಗಳು ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದರು ಎಂದು ತಿಳಿಸಿದರು.

ಇದಕ್ಕೆ ಪ್ರತಿವಾದ ಮಂಡಿಸಿದ ಜಾಮಿಯಾ ವಿವಿ ಪ್ರತಿನಿಧಿಸಿದ್ದ ವಕೀಲರಾದ ಅಮಿತ್ ಸಾಹ್ನಿ ಮತ್ತು ಕಿಸ್ಲೆ ಮಿಶ್ರಾ , ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಲು ವಿಶ್ವವಿದ್ಯಾಲಯ ಆಡಳಿತದಿಂದ ಯಾವುದೇ ಅನುಮತಿಯನ್ನು ಪಡೆದಿರಲಿಲ್ಲ. ವಿವಿ ಆಸ್ತಿಗೆ ಹಾನಿ ಮಾಡಿದ್ದಾರೆ. ಅಲ್ಲದೇ ವಿದ್ಯಾರ್ಥಿಗಳು ಕ್ಯಾಂಟೀನ್ ಹೊರಗೆ ಮಲಗಿದ್ದರು. ಆದರೆ ಅದಕ್ಕೆ ಅವಕಾಶವಿಲ್ಲ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.