ADVERTISEMENT

ಜಮ್ಮು–ಕಾಶ್ಮೀರ: ಉಗ್ರರೊಂದಿಗಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮ

ಏಜೆನ್ಸೀಸ್
Published 1 ಜನವರಿ 2020, 9:18 IST
Last Updated 1 ಜನವರಿ 2020, 9:18 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ:ಜಮ್ಮು–ಕಾಶ್ಮೀರದ ರಾಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್‌ನಖಾರಿ ತ್ರಯಾತ್ ಅರಣ್ಯ ಪ್ರದೇಶದಲ್ಲಿ ಬುಧವಾರ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.

ಅರಣ್ಯ ಪ್ರದೇಶದಲ್ಲಿ ಶಂಕಿತ ಉಗ್ರರು ಅವಿತಿದ್ದಾರೆ ಎಂಬ ಮಾಹಿತಿ ಮೇರೆಗೆ ಶೋಧ ಕಾರ್ಯ ಕೈಗೊಂಡ ವೇಳೆ ಗುಂಡಿನ ಚಕಮಕಿ ನಡೆದಿದೆ. ಉಗ್ರ ನಿಗ್ರಹ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

ಶೋಧ ಕಾರ್ಯ ನಡೆಸುತ್ತಿದ್ದ ವೇಳೆ ಯೋಧರ ಮೇಲೆಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಇಬ್ಬರು ಯೋಧರು ಹುತಾತ್ಮರಾಗಿದ್ದು, ಸೇನೆಯೂ ಪ್ರತಿ ದಾಳಿ ನಡೆಸಿದೆ. ಶೋಧ ಕಾರ್ಯ ಮುಂದುವರಿದಿದೆ ಎಂದು ಸೇನಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

ಜಮ್ಮು–ಕಾಶ್ಮೀರದಲ್ಲಿ 2019ರಲ್ಲಿ 160 ಉಗ್ರರನ್ನು ಹತ್ಯೆ ಮಾಡಲಾಗಿದ್ದು, 102 ಭಯೋತ್ಪಾದಕರನ್ನು ಬಂಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.