ADVERTISEMENT

ಜಮ್ಮು– ಕಾಶ್ಮೀರದಲ್ಲಿ ಹಿಮ ಕುಸಿದು ಮೂವರು ಸೈನಿಕರ ದುರ್ಮರಣ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2022, 20:20 IST
Last Updated 18 ನವೆಂಬರ್ 2022, 20:20 IST

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಚಿಲ್ ಸೆಕ್ಟರ್‌ನಲ್ಲಿ ಹಿಮಪಾತಕ್ಕೆ ಸಿಲುಕಿ ಮೂವರು ಸೇನಾ ಸಿಬ್ಬಂದಿ ಶುಕ್ರವಾರ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕು‍ಪ್ವಾರ ಜಿಲ್ಲೆಯ ಮಚಿಲ್ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಕಾರ್ಯನಿರ್ವಹಿಸುತ್ತಿದ್ದ ಆರ್‌ಆರ್‌ 56ರ ಮೂವರು ಸೈನಿಕರು ಮೃತರಾಗಿದ್ದು, ಅವರ ಮೃತದೇಹ ಸಿಕ್ಕಿದ್ದು, ಮೃತರ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT