ADVERTISEMENT

Money Laundering Case | ಜಮ್ಮು ಮತ್ತು ಕಾಶ್ಮೀರ ಬ್ಯಾಂಕ್‌ ಮೇಲೆ ಇ.ಡಿ ದಾಳಿ

ಪಿಟಿಐ
Published 30 ನವೆಂಬರ್ 2023, 10:08 IST
Last Updated 30 ನವೆಂಬರ್ 2023, 10:08 IST
ಇ.ಡಿ
ಇ.ಡಿ   

ಶ್ರೀನಗರ: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮ ಮತ್ತು ಕಾಶ್ಮೀರ ಬ್ಯಾಂಕ್‌ಗೆ ಸಂಬಂಧಿಸಿದ ಆರು ಸ್ಥಳಗಳಲ್ಲಿ ಜಾರಿ ನಿರ್ದೇಶನಾಯಲವು (ಇ.ಡಿ) ಶೋಧ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುಮಾರು ₹ 250 ಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಈ ಶೋಧ ನಡೆಸಿದೆ.

ಹೌಸಿಂಗ್‌ ಸೊಸೈಟಿ, ರಿವರ್‌ ಝೀಲಂ ಕೋಆಪರೇಟಿವ್‌ ಹೌಸಿಂಗ್‌ ಸೊಸೈಟಿ ಎಂಬ ಕಾಲ್ಪನಿಕ ಹೌಸಿಂಗ್‌ ಸೊಸೈಟಿ ಹೆಸರಿನಲ್ಲಿ ವಂಚನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್‌ ಮಾಜಿ ಅಧ್ಯಕ್ಷನ ಮನೆಯಲ್ಲಿ ಇ.ಡಿ ಶೋಧ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಸೆಕ್ಷನ್‌ 17 ರ ಅಡಿಯಲ್ಲಿ ಇ.ಡಿ ದಾಳಿ ನಡೆಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.