ADVERTISEMENT

ಪಹಲ್ಗಾಮ್ ದಾಳಿ ಬೆನ್ನಲ್ಲೇ ಬಾರಾಮುಲ್ಲಾದಲ್ಲಿ ಇಬ್ಬರು ಉಗ್ರರ ಹತ್ಯೆ ಮಾಡಿದ ಸೇನೆ

ಪಿಟಿಐ
Published 23 ಏಪ್ರಿಲ್ 2025, 5:08 IST
Last Updated 23 ಏಪ್ರಿಲ್ 2025, 5:08 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆಯನ್ನು (ಎಲ್‌ಒಸಿ) ದಾಟಿ ಭಾರತದೊಳಕ್ಕೆ ನುಸುಳಲು ಯತ್ನಿಸಿದ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯ ಉರಿ ನಾಲಾ ಸ್ಥಳದಲ್ಲಿ ಭಯೋತ್ಪಾದಕರ ನುಸುಳುವಿಕೆ ಯತ್ನವನ್ನು ವಿಫಲಗೊಳಿಸಲಾಗಿದೆ ಎಂದು ಸೇನೆ ಹೇಳಿದೆ.

ADVERTISEMENT

ಈ ಕುರಿತು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌/ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ 'ಛಿನಾರ್‌ ಕಾರ್ಪ್ಸ್‌' ಪಡೆ, 2025ರ ಏಪ್ರಿಲ್‌ 23ರಂದು 2–3 ಭಯೋತ್ಪಾದಕರು ಬಾರಾಮುಲ್ಲಾದ ಉರಿ ನಾಲಾ ಪ್ರದೇಶದ ಸರ್ಜೀವನ್‌ನಲ್ಲಿ ಗಡಿ ನುಸುಳಲು ಯತ್ನಿಸಿದ್ದರು. ಅವರನ್ನು ಎಲ್‌ಒಸಿ ಬಳಿ ಸೇನಾ ಪಡೆ ಹಿಮ್ಮೆಟ್ಟಿಸಿದ ಪರಿಣಾಮ ಗುಂಡಿನ ಚಕಮಕಿ ನಡೆಯಿತು. ಈ ವೇಳೆ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ. ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿಸಿದೆ.

ದಕ್ಷಿಣ ಕಾಶ್ಮೀರದ ಅನಂತನಾಗ್‌ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಉಗ್ರರು ಮಂಗಳವಾರವಷ್ಟೇ ಭೀಕರ ಗುಂಡಿನ ದಾಳಿ ನಡೆಸಿದ್ದರು. ಪರಿಣಾಮವಾಗಿ 28 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ದಾಳಿ ನಡೆದು 24 ಗಂಟೆ ಕಳೆಯುವುದರೊಳಗೆ ಒಳನುಸುಳುವಿಕೆ ಯತ್ನ ನಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.