ಪ್ರಾತಿನಿಧಿಕ ಚಿತ್ರ
ಕೃಪೆ: Gemini AI
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಸರ್ಕಾರಿ ಶಾಲೆಯ ಮೇಲೆ ಸೋಮವಾರ ಭೂಕುಸಿತವಾಗಿದೆ. ಇದರಿಂದಾಗಿ, ಒಬ್ಬ ವಿದ್ಯಾರ್ಥಿ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೈಂಚ್–ಕಾಲ್ಸೇನ್ ಪ್ರದೇಶದಲ್ಲಿರುವ ಪ್ರಾಥಮಿಕ ಶಾಲೆಯ ತಗಡಿನ ಛಾವಣಿ ಮೇಲೆ ದೊಡ್ಡ ಬಂಡೆ ಉರುಳಿ ಬಿದ್ದಿದೆ. ಪರಿಣಾಮವಾಗಿ, ಸಾವು–ನೋವು ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.