ADVERTISEMENT

ಕಾಶ್ಮೀರ | ಹೊಸ ಸರ್ಕಾರ ಅಧಿಕಾರಕ್ಕೆ ಬಂದು 2 ತಿಂಗಳಾದರೂ ಶಾಸಕರಿಗಿಲ್ಲ ವೇತನ!

ಝುಲ್ಫಿಕರ್ ಮಜಿದ್
Published 23 ಡಿಸೆಂಬರ್ 2024, 10:39 IST
Last Updated 23 ಡಿಸೆಂಬರ್ 2024, 10:39 IST
<div class="paragraphs"><p>ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆ</p></div>

ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆ

   

–ಪಿಟಿಐ ಚಿತ್ರ

ಶ್ರೀನಗರ: ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಷನಲ್‌ ಕಾನ್ಫರೆನ್ಸ್‌ (ಜೆಕೆಎನ್‌ಸಿ)–ಕಾಂಗ್ರೆಸ್‌ ಮೈತ್ರಿಕೂಟದ ಹೊಸ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳಾದರೂ ನೂತನ ಶಾಸಕರಿಗೆ ವೇತನ ಸಿಕ್ಕಿಲ್ಲ ಎಂದು ವರದಿಯಾಗಿದೆ.

ADVERTISEMENT

2019ರ ಆಗಸ್ಟ್‌ನಲ್ಲಿ ಸಂವಿಧಾನದ 370ನೇ ವಿಧಿ ಅನ್ವಯ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ಹಿಂಪಡೆದಿತ್ತು. ಇದರಿಂದಾಗಿ ತಾಂತ್ರಿಕ ಸಮಸ್ಯೆಗಳು ಉದ್ಭವಿಸಿರುವುದರಿಂದ ಶಾಸಕರ ವೇತನ ತಡವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವೇತನ ವಿಳಂಬ ಕುರಿತು ಕಳವಳ ವ್ಯಕ್ತಪಡಿಸಿರುವ ವಿಧಾನಸಭೆಯ ಸ್ಪೀಕರ್ ಅಬ್ದುಲ್ ರಹೀಮ್ ರಾಥರ್ ಅವರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಶಾಸಕರ ವೇತನವನ್ನು ನಿಯಂತ್ರಿಸುವ ಕಾನೂನು ನಿಬಂಧನೆಗಳ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾನೂನು, ನ್ಯಾಯ ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಯ ಆಡಳಿತ ಕಾರ್ಯದರ್ಶಿಗೆ ಸ್ಪೀಕರ್ ಪತ್ರವನ್ನು ಕಳುಹಿಸಲಾಗಿದ್ದು, ಶಾಸಕರ ವೇತನ ವಿಳಂಬದ ಬಗ್ಗೆ ತುರ್ತಾಗಿ ಸ್ಪಷ್ಟನೆ ನೀಡುವಂತೆ ಕೋರಿದ್ದಾರೆ ಎಂದು ತಿಳಿದುಬಂದಿದೆ.

ಪ್ರಸ್ತುತ ನಿಬಂಧನೆಗಳು ಸಾಕಷ್ಟಿಲ್ಲವೆಂದು ಪರಿಗಣಿಸಿದರೆ ಶಾಸಕರ ವೇತನ ಮತ್ತು ಭತ್ಯೆಗಳನ್ನು ಹೆಚ್ಚಿಸುವ ಮಸೂದೆಯನ್ನು ಮಂಡಿಸಲು ಶಾಸಕಾಂಗ ಸಭೆಗೆ ಅಧಿಕಾರವಿದೆ ಎಂದೂ ಮೂಲಗಳು ವಿವರಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.