ADVERTISEMENT

ಜಮ್ಮು-ಕಾಶ್ಮೀರ: ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

ಏಜೆನ್ಸೀಸ್
Published 7 ಅಕ್ಟೋಬರ್ 2020, 3:52 IST
Last Updated 7 ಅಕ್ಟೋಬರ್ 2020, 3:52 IST
ಕಾರ್ಯಾಚರಣೆಯಲ್ಲಿ ತೊಡಗಿರುವ ಭದ್ರತಾ ಪಡೆ ಸಿಬ್ಬಂದಿ (ಸಾಂದರ್ಭಿಕ ಚಿತ್ರ)
ಕಾರ್ಯಾಚರಣೆಯಲ್ಲಿ ತೊಡಗಿರುವ ಭದ್ರತಾ ಪಡೆ ಸಿಬ್ಬಂದಿ (ಸಾಂದರ್ಭಿಕ ಚಿತ್ರ)   

ಶ್ರೀನಗರ: ಜಮ್ಮು–ಕಾಶ್ಮೀರದ ಶೋಪಿಯನ್‌ ಪ್ರದೇಶದಲ್ಲಿ ಬುಧವಾರ ಉಗ್ರರು ಹಾಗೂ ಭದ್ರತಾ ಪಡೆ ಸಿಬ್ಬಂದಿ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ದಾಳಿ ನಡೆಸಿದ್ದು, ಘಟನಾ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT