ADVERTISEMENT

ಕಾಶ್ಮೀರದಲ್ಲಿ ಸಿಆರ್‌ಪಿಎಫ್ ಸಿಬ್ಬಂದಿ ಮೇಲೆ ಉಗ್ರರ ದಾಳಿ; ಇಬ್ಬರು ಯೋಧರ ಸಾವು

ಏಜೆನ್ಸೀಸ್
Published 5 ಅಕ್ಟೋಬರ್ 2020, 9:03 IST
Last Updated 5 ಅಕ್ಟೋಬರ್ 2020, 9:03 IST
ಕಾಶ್ಮೀರದಲ್ಲಿ ಭದ್ರತಾ ಪಡೆಯ ಕಾರ್ಯಾಚರಣೆ–ಸಾಂದರ್ಭಿಕ ಚಿತ್ರ
ಕಾಶ್ಮೀರದಲ್ಲಿ ಭದ್ರತಾ ಪಡೆಯ ಕಾರ್ಯಾಚರಣೆ–ಸಾಂದರ್ಭಿಕ ಚಿತ್ರ   

ಶ್ರೀನಗರ: ಉಗ್ರರು ಕೇಂದ್ರೀಯ ಮೀಸಲು ಪೊಲೀಸ್‌ ಪಡೆಯ (ಸಿಆರ್‌ಪಿಎಫ್‌) ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಯೋಧರು ಸಾವಿಗೀಡಾಗಿದ್ದಾರೆ.

ದಕ್ಷಿಣ ಕಾಶ್ಮೀರದ ಪಂಪೋರ್‌ನಲ್ಲಿ ಗಸ್ತು ತಿರುಗುತ್ತಿದ್ದ ಸಿಆರ್‌ಪಿಎಫ್‌ ಸಿಬ್ಬಂದಿ ಮೇಲೆ ಉಗ್ರರು ಸೋಮವಾರ ದಾಳಿ ನಡೆಸಿದ್ದಾರೆ. ಗಾಯಗೊಂಡಿದ್ದ ಐವರು ಸಿಬ್ಬಂದಿಯನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದ್ದು, ಆ ಪೈಕಿ ಇಬ್ಬರು ಮೃತಪಟ್ಟಿರುವುದಾಗಿ ವರದಿಯಾಗಿದೆ.

ದಾಳಿಯ ಬಳಿಕ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಲ್ಲಿಸಲಾಗಿದೆ ಹಾಗೂ ಭದ್ರತಾ ಸಿಬ್ಬಂದಿ ಶೋಧ ಕಾರ್ಯ ನಡೆಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.