ಶ್ರೀನಗರ: 62 ದಿನಗಳ ಅಮರನಾಥ ಯಾತ್ರೆ ಇಂದು ಗುರುವಾರ ಮುಕ್ತಾಯಗೊಳ್ಳಲಿದ್ದು, ಅಮರನಾಥ ಗುಹೆಯಲ್ಲಿ ಆರತಿ ಪೂಜೆ ನೆರವೇರಿಸಲಾಯಿತು. ಇದರ ವಿಡಿಯೊವನ್ನು ಸುದ್ದಿಸಂಸ್ಥೆ ಎಎನ್‌ಐ ‘ಎಕ್ಸ್’ನಲ್ಲಿ ಹಂಚಿಕೊಂಡಿದೆ.
ಜುಲೈ 1ರಿಂದ ಅಮರನಾಥ ಯಾತ್ರೆ ಆರಂಭವಾಗಿತ್ತು. ಇಲ್ಲಿಯವರೆಗೆ 3 ಲಕ್ಷಕ್ಕೂ ಹೆಚ್ಚು ಭಕ್ತರು ದೇಗುಲಕ್ಕೆ ಭೇಟಿ ನೀಡಿದ್ದಾರೆ.
‘ಮಳೆ, ಭೂಕುಸಿತ ಹಾಗೂ ವಾತಾವರಣದ ಕಾರಣದಿಂದಾಗಿ ಯಾತ್ರೆಯನ್ನು ಕೆಲವು ದಿನಗಳ ಕಾಲ ಸ್ಥಗಿತಗೊಳಿಸಲಾಗಿತ್ತು. ಉಳಿದಂತೆ ಈ ಬಾರಿಯ ಯಾತ್ರೆ ಸುಗಮವಾಗಿ ನಡೆಯಿತು’ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.