ADVERTISEMENT

ಜಮ್ಮು–ಕಾಶ್ಮೀರ: ಎನ್‌ಕೌಂಟರ್‌ನಲ್ಲಿ 3 ಉಗ್ರರ ಹತ್ಯೆ, ಪೊಲೀಸ್‌ ಅಧಿಕಾರಿ ಹುತಾತ್ಮ

ಏಜೆನ್ಸೀಸ್
Published 30 ಆಗಸ್ಟ್ 2020, 2:51 IST
Last Updated 30 ಆಗಸ್ಟ್ 2020, 2:51 IST
ಎನ್‌ಕೌಂಟರ್‌ ನಡೆದ ಸ್ಥಳ
ಎನ್‌ಕೌಂಟರ್‌ ನಡೆದ ಸ್ಥಳ   

ಶ್ರೀನಗರ: ಇಲ್ಲಿನ ಪಂತ್‌ ಚೌಕ್ ಪ್ರದೇಶದಲ್ಲಿ ಶನಿವಾರ ತಡ ರಾತ್ರಿಭದ್ರತಾ ಪಡೆಗಳುನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರು ಹತರಾಗಿದ್ದು ಒಬ್ಬ ಪೊಲೀಸ್‌ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ.

ನಿಖರ ಮಾಹಿತಿ ಮೇರೆಗೆ ಪಂತ್‌ ಚೌಕ್‌ನ ಮನೆಯೊಂದರಲ್ಲಿ ಉಗ್ರರು ಅಡಗಿರುವ ಮಾಹಿತಿ ಪಡೆದ ಭದ್ರತಾ ಪಡೆಗಳು ಪೊಲೀಸರ ಸಹಾಯದೊಂದಿಗೆ ಕಾರ್ಯಾಚರಣೆ ನಡೆಸಿದರು. ಈ ವೇಳೆ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದ್ದು ಕಾರ್ಯಾಚರಣೆ ಮುಂದುವರೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಹುತಾತ್ಮರಾಗಿರುವ ಪೊಲೀಸ್‌ ಅಧಿಕಾರಿ ಇಲ್ಲಿನ ಠಾಣೆಯೊಂದರಲ್ಲಿ ಎಎಸ್‌ಐ ಆಗಿ ಕೆಲಸ ಮಾಡುತ್ತಿದ್ದರು ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ,

ADVERTISEMENT

ಮುನ್ನೆಚ್ಚರಿಕಾ ಕ್ರಮವಾಗಿ ನಗರದಲ್ಲಿ ಇಂಟರ್‌ನೆಟ್‌ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಜತೆಗೆ, ವಾಹನ ಮತ್ತು ಜನರ ಸಂಚಾರಕ್ಕೂ ನಿರ್ಬಂಧ ವಿಧಿಸಲಾಗಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.