ADVERTISEMENT

ಜಮ್ಮು ಮತ್ತು ಕಾಶ್ಮೀರದಲ್ಲಿ ಎನ್‌ಕೌಂಟರ್: ಲಷ್ಕರ್–ಇ–ತೈಯಬಾದ ಮೂವರು ಉಗ್ರರ ಹತ್ಯೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಡಿಸೆಂಬರ್ 2022, 4:03 IST
Last Updated 20 ಡಿಸೆಂಬರ್ 2022, 4:03 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯಲ್ಲಿ ರಕ್ಷಣಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಲಷ್ಕರ್‌–ಇ–ತೈಯಬಾ (ಎಲ್‌ಇಟಿ) ಸಂಘಟನೆಯ ಮೂವರು ಉಗ್ರರು ಹತ್ಯೆಯಾಗಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಉಗ್ರರು ಅಡಗಿಕೊಂಡಿರುವ ಬಗ್ಗೆ ಲಭ್ಯವಾದ ಖಚಿತ ಮಾಹಿತಿ ಆಧರಿಸಿ, ಶೋಪಿಯಾನ್‌ ಜಿಲ್ಲೆಯ ಝೈನಪೊರಾ ಪ್ರದೇಶದಲ್ಲಿರುವ ಮುಂಜ್‌ ಮಾರ್ಗ್‌ನಲ್ಲಿ ರಕ್ಷಣಾ ಪಡೆಗಳುಶೋಧ ಕಾರ್ಯಾಚರಣೆ ಆರಂಭಿಸಿದವು. ಬಳಿಕ ನಡೆದಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತ್ಯೆಯಾಗಿದ್ದಾರೆಎಂದು ಮಾಹಿತಿ ನೀಡಿದ್ದಾರೆ.

ಉಗ್ರ ಸಂಘಟನೆ ಎಲ್‌ಇಟಿಗೆ ಸೇರಿದ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಹತ್ಯೆಯಾದವರ ಗುರುತು ಪತ್ತೆ ಮಾಡಲಾಗುತ್ತಿದೆ. ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು 'ಕಾಶ್ಮೀರ ವಲಯ ಪೊಲೀಸ್‌' ಟ್ವೀಟ್ ಮಾಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.