ಶ್ರೀನಗರ: ಜಮ್ಮು–ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಯು ಬುಧವಾರ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಅಪರಿಚಿತ ಉಗ್ರರು ಹತರಾಗಿದ್ದು, ನಾಗರಿಕರೊಬ್ಬರಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದರು.
ಪುಲ್ವಾಮ ಜಿಲ್ಲೆಯ ಟಿಕೆನಾ ಪ್ರದೇಶದಲ್ಲಿ ಉಗ್ರರು ಅಡಗಿರುವ ಮಾಹಿತಿ ಆಧರಿಸಿ ಬುಧವಾರ ಮುಂಜಾನೆ ಜಾವ ಶೋಧ ಕಾರ್ಯಾಚರಣೆ ನಡೆಸಲಾಯಿತು. ಈ ವೇಳೆ ಉಗ್ರರು ಮೊದಲು ಗುಂಡಿನ ದಾಳಿ ನಡೆಸಿದರು. ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆಯು ದಾಳಿ ನಡೆಸಿದೆ ಎಂದು ಅವರು ಮಾಹಿತಿ ನೀಡಿದರು.
ಈ ಗುಂಡಿನ ಚಕಮಕಿಯಲ್ಲಿ ನಾಗರಿಕರೊಬ್ಬರಿಗೆ ಗಾಯಗಳಾಗಿವೆ. ಮೂವರು ಉಗ್ರರು ಮೃತಪಟ್ಟಿದ್ದಾರೆ. ಹತ್ಯೆಗೀಡಾ ಉಗ್ರರು ಯಾವ ಸಂಘಟನೆ ಸೇರಿದವರು ಎಂಬುದರ ಬಗ್ಗೆ ಪತ್ತೆ ಹಚ್ಚಲಾಗುತ್ತಿದೆ ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.