ಬಂಧನ
(ಸಾಂದರ್ಭಿಕ ಚಿತ್ರ)
ಜಮ್ಮು: ಮಾದಕ ವಸ್ತು ಮಾರಾಟ ಆರೋಪದ ಮೇಲೆ ದಂಪತಿಯನ್ನು ಬಂಧಿಸಲಾಗಿದ್ದು, ಅವರಿಂದ 28 ಗ್ರಾಂ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪೊಲೀಸರು ಗಸ್ತು ತಿರುಗುತ್ತಿದ್ದಾಗ ರಾಹುಲ್ ಸಿಂಗ್ ಜಮ್ವಾಲ್ ಮತ್ತು ಅವರ ಪತ್ನಿ ಶಗುನ್ ಚಾಂಡೆಲ್ ಅನುಮಾನಸ್ಪದವಾಗಿ ತಿರುಗಾಡುತ್ತಿದ್ದರು. ಈ ವೇಳೆ ಪೊಲೀಸರು ಅವರನ್ನು ತಡೆದಿದ್ದಾರೆ.
ಅವರನ್ನು ತಪಾಸಣೆ ಮಾಲಾಗಿದ್ದು, ಈ ವೇಳೆ 28 ಗ್ರಾಂ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ. ಅವರು ಡ್ರಗ್ ಪೆಡ್ಲರ್‌ಗಳಾಗಿ ಕೆಲಸ ಮಾಡುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಇಬ್ಬರು ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಅವರಿಗಿರುವ ಸಂಪರ್ಕದ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.