ADVERTISEMENT

ಜಮ್ಮು: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌; ಪೆಟ್ರೋಲ್ ಪಂಪ್‌ನಲ್ಲಿ ಸ್ಫೋಟ

ಪಿಟಿಐ
Published 2 ಮೇ 2023, 10:01 IST
Last Updated 2 ಮೇ 2023, 10:01 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಜಮ್ಮು: ಜಮ್ಮು ಮತ್ತು ಕಾಶ್ಮೀರದ ನರ್ವಾಲ್ ಪ್ರದೇಶದಲ್ಲಿ ಪೆಟ್ರೋಲ್ ಪಂಪ್‌ವೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ.

ಪ್ರಾಥಮಿಕ ತನಿಖೆಯಲ್ಲಿ ಮಣ್ಣಿನಡಿಯ ವಿದ್ಯುತ್ ಬೋರ್ಡ್‌ನಲ್ಲಿ ಎಲೆಕ್ಟ್ರಿಕ್ ಶಾರ್ಟ್ ಸರ್ಕ್ಯೂಟ್‌‌ನ ಪರಿಣಾಮ ಸ್ಫೋಟ ಸಂಭವಿಸಿದೆ ಎಂಬುದು ತಿಳಿದು ಬಂದಿದೆ ಎಂದು ಪೂರ್ವ ಜಮ್ಮುವಿನ ಸಬ್ ಡಿವಿಷನಲ್ ಪೊಲೀಸ್ ಅಧಿಕಾರಿ ಜಹೀರ್ ಅಬ್ಬಾಸ್ ಜಫ್ರಿ ತಿಳಿಸಿದ್ದಾರೆ.

ADVERTISEMENT

ಪೆಟ್ರೋಲ್ ಪಂಪ್‌ ಭಾಗಶಃ ಹಾನಿಯಾಗಿದೆ. ಘಟನಾ ಸ್ಥಳಕ್ಕೆ ತಜ್ಞರು ಭೇಟಿ ನೀಡಲಿದ್ದು, ಪರಿಶೀಲಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಬೆಳಿಗ್ಗೆ 10.50ಕ್ಕೆ ಘಟನೆ ನಡೆದಿದ್ದು, ವಿದ್ಯುತ್ ಬೋರ್ಡ್‌ಗೆ ಮಳೆ ನೀರು ನುಗ್ಗಿರುವುದು ಅವಘಡಕ್ಕೆ ಕಾರಣ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.