ADVERTISEMENT

ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಯೋಧರ ಗುಂಡಿಗೆ ಇಬ್ಬರು ಉಗ್ರರ ಬಲಿ

ಏಜೆನ್ಸೀಸ್
Published 25 ಮೇ 2020, 6:18 IST
Last Updated 25 ಮೇ 2020, 6:18 IST
ಭಾರತೀಯ ಸೇನೆ
ಭಾರತೀಯ ಸೇನೆ   

ಶ್ರೀನಗರ:ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಯ ಯೋಧರುಇಬ್ಬರು ಭಯೋತ್ಪಾದಕರ ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದ್ದಾರೆ.

ಇಂದು(ಸೋಮವಾರ)ಮುಂಜಾನೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ ಎಂದು ಕಾಶ್ಮೀರದ ಪೊಲೀಸ್ ಮುಖ್ಯಾಧಿಕಾರಿವಿಜಯ್ ಕುಮಾರ್ ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರದ ಕುಲ್‌ಗಾಂ ಜಿಲ್ಲೆಯ ಮಂಜ್‌ಗಮ್ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಇಂದು ಬೆಳಿಗ್ಗೆ ಗುಂಡಿನ ಚಕಮಕಿ ಆರಂಭವಾಗಿತ್ತು.

ADVERTISEMENT

34 ರಾಷ್ಟ್ರೀಯ ರೈಫಲ್ಸ್, ಕೇಂದ್ರ ಮೀಸಲು ಪೊಲೀಸ್ ಪಡೆ ಮತ್ತು ಕುಲ್‌ಗಮ್‌ ಪೊಲೀಸರು ಕಾರ್ಯಾಚರಣೆಯಲ್ಲಿ ತೊಡಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.