ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಅರಣ್ಯ ಪ್ರದೇಶಗಳಲ್ಲಿ ಉಗ್ರರ ಗುಂಪೊಂದು ಅಡಗಿರುವ ಮಾಹಿತಿಯ ಮೇರೆಗೆ, ಸೇನಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಹ್ಲಾನ್ ಗಡೋಲ್ ಪ್ರದೇಶವು ಇತ್ತೀಚೆಗೆ ಉಗ್ರರ ಪ್ರಮುಖ ಅಡಗುತಾಣವಾಗುತ್ತಿದ್ದು, ಎರಡು ದಿನಗಳ ಹಿಂದೆ ಈ ಪ್ರದೇಶದಲ್ಲಿ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಹೇಳಿದ್ದಾರೆ.
ಇದೇ ಪ್ರದೇಶದಲ್ಲಿ 2023ರ ಸೆಪ್ಟೆಂಬರ್ ಹಾಗೂ 2024ರ ಆಗಸ್ಟ್‌ನಲ್ಲಿ ಉಗ್ರರ ಮೇಲೆ ಎರಡು ಎನ್‌ಕೌಂಟರ್ ಮಾಡಲಾಗಿತ್ತು ಎಂದು ಮಾಹಿತಿ ನೀಡಿದ್ದಾರೆ.
ಕಳೆದ ವರ್ಷ ಅಹ್ಲಾನ್ ಗಡೋಲ್ ಪ್ರದೇಶದಲ್ಲಿ ಉಗ್ರರೊಂದಿಗಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೈನಿಕರು ಹಾಗೂ ಒಬ್ಬ ನಾಗರಿಕ ಹುತಾತ್ಮರಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.