ಜಮ್ಮು: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಒಳ ಪ್ರವೇಶಿಸುವ ಪ್ರದೇಶದಲ್ಲಿ ಬುಧವಾರ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಕಚೇರಿಯ ಕೆಲವು ಪಿಠೋಪಕರಣ, ಕಡತ ಹಾಗೂ ಹಳೆಯ ಫೋಟೊಗಳು ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಳಗ್ಗೆ 9.34ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ನಂದಿಸಲಾಗಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿ ಹೇಳಿದ್ದಾರೆ.
ವಿಧಾನಸಭೆಯ ಒಳ ಪ್ರವೇಶಿಸುವ ಪ್ರದೇಶದಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಅವಘಡ ಸಂಭವಿಸಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದಿದ್ದಾರೆ.
ಘಟನೆಯ ನಿಖರ ಕಾರಣಕ್ಕಾಗಿ ತನಿಖೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.