ADVERTISEMENT

ಜಮ್ಮು–ಕಾಶ್ಮೀರದ ದೋಡಾದಲ್ಲಿ ಸ್ಫೋಟ: ಇಬ್ಬರು ವಶಕ್ಕೆ

ಪಿಟಿಐ
Published 11 ಸೆಪ್ಟೆಂಬರ್ 2025, 10:34 IST
Last Updated 11 ಸೆಪ್ಟೆಂಬರ್ 2025, 10:34 IST
   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಗುರುವಾರ ಶಂಕಿತ ಸ್ಫೋಟ ಸಂಭವಿಸಿದ್ದು, ಆ ಪ್ರದೇಶದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ ಎಂದು ಮೂಲಗಳು ತಿಳಿಸಿವೆ.

ದೋಡಾದ ಜಮೈ ಮಸೀದಿ ಬಳಿಯ ದುಮ್ರಿ ಮೊಹಲ್ಲಾದಲ್ಲಿ ಸ್ಫೋಟ ಸಂಭವಿಸಿದೆ. ಘಟನೆ ಸಂಬಂಧ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.

ಸದ್ಯ ಪೊಲೀಸರು ಘಟನಾ ಸ್ಥಳಕ್ಕೆ ತಲುಪಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.