ADVERTISEMENT

ಕಾಶ್ಮೀರದ ಟ್ರಾಲ್‌ನಲ್ಲಿ ಎನ್‌ಕೌಂಟರ್‌ಗೆ ಇಬ್ಬರು ಉಗ್ರರು ಬಲಿ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2019, 6:24 IST
Last Updated 5 ಮಾರ್ಚ್ 2019, 6:24 IST
   

ಶ್ರೀನಗರ:ಜಮ್ಮು ಮತ್ತು ಕಾಶ್ಮೀರದ ಟ್ರಾಲ್‌ನಲ್ಲಿಮಂಗಳವಾರ ಭದ್ರತಾಪಡೆ ನಡೆಸಿದಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ.

ಉಗ್ರರು ಅಡಗಿರುವ ಮಾಹಿತಿ ಮೇರೆಗೆ ಭದ್ರತಾ ಪಡೆ ಕಾರ್ಯಚಾರಣೆ ನಡೆಸುತ್ತಿದ್ದು, ಉಗ್ರರು ಮತ್ತು ಭದ್ರತಾ ಪಡೆ ಮಧ್ಯೆ ಗುಂಡಿನ ಚಕಮಕಿ ನಡೆದಿದೆ. ಕಾರ್ಯಾಚರಣೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿದ್ದಾಗಿಎಎನ್‌ಐ ಟ್ವೀಟ್‌ ಮಾಡಿದೆ.

ಪುಲ್ವಾಮ ದಾಳಿಯ ಬಳಿಕ ಭಾರತೀಯ ವಾಯುಪಡೆ ಪಾಕಿಸ್ತಾನದ ಬಾಲಾಕೋಟ್‌ನಲ್ಲಿ ವಾಯುದಾಳಿ ನಡೆಸಿದ ಬಳಿಕವೂ ಉಗ್ರರ ಉಪಟಳ ಹಾಗೂ ಪಾಕಿಸ್ತಾನ ಸೇನೆಯಿಂದ ಕದನ ವಿರಾಮ ಉಲ್ಲಂಘನೆ ಮುಂದುವರಿದಿದೆ.

ADVERTISEMENT

* ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.