ADVERTISEMENT

ಜಮ್ಮು ಹಾಗೂ ಕಾಶ್ಮೀರದಲ್ಲಿ ಹೈಕೋರ್ಟ್ ಮಧ್ಯಸ್ಥಿಕೆ ಕೇಂದ್ರಗಳ ಸ್ಥಾಪನೆಗೆ ಕ್ರಮ

ಪಿಟಿಐ
Published 20 ಸೆಪ್ಟೆಂಬರ್ 2020, 6:38 IST
Last Updated 20 ಸೆಪ್ಟೆಂಬರ್ 2020, 6:38 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್, ಕೇಂದ್ರಾಡಳಿತ ಪ್ರದೇಶದ ಎರಡೂ ವಲಯಗಳಲ್ಲಿ ಮಧ್ಯಸ್ಥಿಕೆ ಕೇಂದ್ರಗಳನ್ನು ಸ್ಥಾಪಿಸಲಿದ್ದು, ಪ್ರಕರಣಗಳ ತ್ವರಿತ ವಿಲೇವಾರಿಗಾಗಿ ಇವುಗಳಿಗೆ ಸಾಂಸ್ಥಿಕ ಸ್ವರೂಪವನ್ನು ನೀಡಲಿದೆ.

ಶ್ರೀನಗರ ಮತ್ತು ಜಮ್ಮುವಿನಲ್ಲಿ ಮಧ್ಯಸ್ಥಿಕೆ ಕೇಂದ್ರ ಸ್ಥಾಪಿಸಲು ಹೈಕೋರ್ಟ್ ಒಪ್ಪಿದೆ ಎಂದು ಹೈಕೋರ್ಟ್ ವಕ್ತಾರರು ತಿಳಿಸಿದ್ದಾರೆ. ಇದನ್ನು ಜಮ್ಮು ಮತ್ತು ಕಾಶ್ಮೀರ ಅಂತರರಾಷ್ಟ್ರೀಯ ಮಧ್ಯಸ್ಥಿಕೆ ಕೇಂದ್ರ ಎಂದು ಗುರುತಿಸಲಾಗುತ್ತದೆ.

ಕಕ್ಷಿದಾರರಿಗೆ ನ್ಯಾಯಸಮ್ಮತ, ತ್ವರಿತವಾದ ನ್ಯಾಯದಾನ ಒದಗಿಸುವುದು ಇದರ ಉದ್ದೇಶ. ಸುಲಲಿತ ಮತ್ತು ವ್ಯವಸ್ಥಿತವಾಗಿ ಈ ಕೇಂದ್ರಗಳುಕಾರ್ಯನಿರ್ವಹಿಸಲು ಜಮ್ಮು ಮತ್ತು ಕಾಶ್ಮೀರ ಅಂತರರಾಷ್ಟ್ರೀಯ ಮಧ್ಯಸ್ಥಿಕೆ ಕೇಂದ್ರ (ಅಂತರರಾಷ್ಟ್ರೀಯ ನಿರ್ವಹಣಾ ನಿಯಮಗಳು 2020) ಅನ್ನೂ ರೂಪಿಸಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ.

ADVERTISEMENT

ನಿಯಮಗಳ ಪ್ರಕಾರ, ಜಮ್ಮು ಮತ್ತು ಕಾಶ್ಮೀರ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿಗಳು ಉಭಯ ಕೇಂದ್ರಗಳ ಮುಖ್ಯ ಪೋಷಕರಾಗಿರುತ್ತಾರೆ. ಇವುಗಳ ನಿರ್ವಹಣೆಗಾಗಿ ನ್ಯಾಯಾಂಗದ ಪ್ರಮುಖರನ್ನು ಒಳಗೊಂಡ ಸಮಿತಿ ರಚನೆಯಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.