ADVERTISEMENT

ಕಾಶ್ಮೀರ: ಜೈಶ್‌–ಎ–ಮೊಹಮ್ಮದ್‌ ಸಂಘಟನೆಗೆ ಸೇರಿದ ಉಗ್ರನ ಹತ್ಯೆ

ಪಿಟಿಐ
Published 23 ಜನವರಿ 2026, 22:15 IST
Last Updated 23 ಜನವರಿ 2026, 22:15 IST
<div class="paragraphs"><p>ಭದ್ರತಾ ಪಡೆಗಳು</p></div>

ಭದ್ರತಾ ಪಡೆಗಳು

   

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಜೈಶ್‌–ಎ–ಮೊಹಮ್ಮದ್‌ ಸಂಘಟನೆಗೆ ಸೇರಿದ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಶುಕ್ರವಾರ ಗುಂಡಿಕ್ಕಿ ಹತ್ಯೆಗೈದಿವೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೇನೆ ಮತ್ತು ಕೇಂದ್ರೀಯ ಮೀಸಲು ಪೊಲೀಸ್‌ ಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದವು. ಮೃತನನ್ನು ಜೈಶ್‌–ಎ–ಮೊಹಮ್ಮದ್‌ ಸಂಘಟನೆಯ ಕಮಾಂಡರ್‌ ಉಸ್ಮಾನ್‌ ಎಂದು ಗುರುತಿಸಲಾಗಿದ್ದು, ಆತನಿಂದ ಬೃಹತ್‌ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.