ADVERTISEMENT

ಮಾರ್ಚ್‌ 5ರಿಂದ 12,650 ಸ್ಥಾನಗಳಿಗೆ ಉಪ ಚುನಾವಣೆ

ಜಮ್ಮು ಮತ್ತು ಕಾಶ್ಮೀರ: ಇವಿಎಂ ಬದಲಿಗೆ ಮತಪತ್ರ ಬಳಕೆಗೆ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2020, 19:18 IST
Last Updated 13 ಫೆಬ್ರುವರಿ 2020, 19:18 IST

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಂಚಾಯಿತಿಗಳಲ್ಲಿ ಖಾಲಿ ಉಳಿದಿರುವ 12,650 ಸ್ಥಾನಗಳಿಗೆ ಮಾರ್ಚ್‌ 5ರಿಂದ ಎಂಟು ಹಂತಗಳಲ್ಲಿ ಉಪಚುನಾವಣೆ ನಡೆಯಲಿದೆ.

‘ಮಾರ್ಚ್‌ 5ರಿಂದ 20ರವರೆಗೆ ಎಂಟು ಹಂತಗಳಲ್ಲಿ ಮತದಾನ ನಡೆಯಲಿದೆ. ಶೀಘ್ರವೇ ಅಧಿಸೂಚನೆ ಹೊರಡಿಸಲಾಗುವುದು’ ಎಂದು ಕೇಂದ್ರಾಡಳಿತ ಪ್ರದೇಶದ ಮುಖ್ಯ ಚುನಾವಣಾಧಿಕಾರಿ ಶೈಲೆಂದ್ರ ಕುಮಾರ್‌ ಅವರು ಗುರುವಾರ ತಿಳಿಸಿದರು.

‘ಮತದಾನ ಪ್ರಕ್ರಿಯೆಯಲ್ಲಿ ಇವಿಎಂ ಬದಲಿಗೆ ಮತಪತ್ರಗಳನ್ನು ಬಳಸಲಾಗುವುದು. 11,639 ಪಂಚ (ಸದಸ್ಯರ ಸ್ಥಾನ) ಹಾಗೂ 1,011 ಸರಪಂಚ (ಅಧ್ಯಕ್ಷ) ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಚುನಾವಣೆಗೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದು ಅವರು ತಿಳಿಸಿದರು.

ADVERTISEMENT

ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಪಡಿಸಿ, ರಾಜ್ಯದ ಮರು ವಿಂಗಡಣೆ ಮಾಡಿದ ನಂತರ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ. 2018ರ ನವೆಂಬರ್‌– ಡಿಸೆಂಬರ್‌ನಲ್ಲಿ ರಾಜ್ಯದ 22,214 ಪಂಚ ಹಾಗೂ 3,458 ಸರಪಂಚ ಸ್ಥಾನಗಳಿಗೆ ಚುನಾವಣೆ ನಡೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.