ADVERTISEMENT

ಜಮ್ಮು-ಕಾಶ್ಮೀರ: ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರ ಬಂಧನ

ಏಜೆನ್ಸೀಸ್
Published 10 ಸೆಪ್ಟೆಂಬರ್ 2020, 8:20 IST
Last Updated 10 ಸೆಪ್ಟೆಂಬರ್ 2020, 8:20 IST
ಭಾರತೀಯ ಸೇನೆ- ಸಾಂದರ್ಭಿಕ ಚಿತ್ರ
ಭಾರತೀಯ ಸೇನೆ- ಸಾಂದರ್ಭಿಕ ಚಿತ್ರ   

ಶ್ರೀನಗರ: ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಜೈಶ್-ಎ-ಮೊಹಮ್ಮದ್ (ಜೆಎಂ) ಉಗ್ರರನ್ನು ಬಂಧಿಸಲಾಗಿದೆ ಎಂದು ಎಎನ್‌ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಕುಪ್ವಾರಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಲಾಗಿದ್ದು, ಈ ಸಂದರ್ಭದಲ್ಲಿ ಇಬ್ಬರು ಜೆಎಂ ಉಗ್ರರನ್ನು ಬಂಧಿಸಲಾಗಿದೆ. ಬಂಧಿತರಿಂದ ಶಸ್ತ್ರಾಸ್ತ್ರ ಮತ್ತು ಹಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬಂಧಿತರಾದ ಉಗ್ರರಿಂದಒಂದು ಎ.ಕೆ -47 ರೈಫಲ್, ಎರಡು ಗ್ರೆನೇಡ್, 30 ಕಾಡುತೂಸುಗಳನ್ನು ಮತ್ತು 7 ಲಕ್ಷ ರೂಪಾಯಿ ಮೌಲ್ಯದ ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.