ADVERTISEMENT

ಕಾಶ್ಮೀರದ ಶ್ರೀನಗರದಲ್ಲಿ ಗುಂಡಿನ ದಾಳಿ: ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಗಾಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಫೆಬ್ರುವರಿ 2022, 14:42 IST
Last Updated 28 ಫೆಬ್ರುವರಿ 2022, 14:42 IST
 ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಇಲ್ಲಿನ ಬಟ್ಮಾಲುಪ್ರದೇಶದ ಧೋಬಿ ಮೊಹಲ್ಲಾ ಪ್ರದೇಶದಲ್ಲಿ ಭಯೋತ್ಪಾದಕರು ಸೋಮವಾರ ಗುಂಡಿನ ದಾಳಿ ನಡೆಸಿದ್ದಾರೆ.

ಘಟನೆಯಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಇನ್ಸ್‌ಪೆಕ್ಟರ್ ಶೇಖ್ ಫಿರ್‌ದೌಸ್‌ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಲಿಸ್‌ ಅಧಿಕಾರಿಗೆ ಶ್ರೀನಗರದ ಎಸ್‌ಎಂಎಚ್‌ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ADVERTISEMENT

ಘಟನಾ ಸ್ಥಳವನ್ನು ಭದ್ರತಾ ಪಡೆಗಳು ಸುತ್ತುವರಿದಿದ್ದು, ಉಗ್ರರಿಗಾಗಿ ಶೋಧ ನಡೆಸುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.