ಚಿತ್ರ ಕೃಪೆ: ಪ್ರಾತಿನಿಧಿಕ ಚಿತ್ರ
ಶ್ರೀನಗರ : ಜಮ್ಮುವಿನಲ್ಲಿ ಭಾರಿ ಮಳೆಯಿಂದ ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರಿ ಮಳೆಯಿಂದಾಗಿ ಸಮ್ರೋಲಿ ಮತ್ತು ಬನಿಹಾಲ್ ಸುತ್ತಮುತ್ತ ಗುಡ್ಡ ಕುಸಿತ ಉಂಟಾಗಿದೆ.
ಜಮ್ಮುವಿನಲ್ಲಿ ಇನ್ನು ಕೆಲವು ದಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಶ್ರೀನಗರದ ಉಳಿದೆಡೆ ಸಂಪರ್ಕಿಸುವ ಮುಖ್ಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದೆ.
ಸೆಪ್ಟೆಂಬರ್ 3 ಮತ್ತು 4 ರಂದು ಜಮ್ಮು– ಕಾಶ್ಮೀರದ ಹಲವು ಪ್ರದೇಶಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ವಕ್ತಾರರು ಮುನ್ಸೂಚನೆ ನೀಡಿದ್ದಾರೆ.
ಭಾರಿ ಮಳೆಯ ಸಾಧ್ಯತೆಯ ಹಿನ್ನೆಲೆಯಲ್ಲಿ ಅನಗತ್ಯವಾಗಿ ಪ್ರಯಾಣಿಸದಂತೆ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.