ADVERTISEMENT

ಜಮ್ಮು–ಕಾಶ್ಮೀರ: ಉಗ್ರರ ಗುಂಡಿಗೆ ನಾಗರಿಕ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ಫೆಬ್ರುವರಿ 2022, 12:29 IST
Last Updated 25 ಫೆಬ್ರುವರಿ 2022, 12:29 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಶ್ರೀನಗರ: ಜಮ್ಮು–ಕಾಶ್ಮೀರದ ಶೋಪಿಯಾನ್‌ನಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಶುಕ್ರವಾರ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಇದೇ ವೇಳೆ ಉಗ್ರರ ಗುಂಡಿಗೆ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಗ್ರರು ಅವಿತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಮತ್ತು ಭದ್ರತಾ ಪಡೆಗಳು ಜಂಟಿಯಾಗಿ ಶೋಧ ಕಾರ್ಯ ಆರಂಭಿಸಿದ್ದವು. ಈ ಸಂದರ್ಭದಲ್ಲಿ ಉಗ್ರರು ಗುಂಡಿನ ದಾಳಿ ಆರಂಭಿಸಿದ್ದು, ಭದ್ರತಾ ಪಡೆಗಳೂ ಪ್ರತಿ ದಾಳಿ ನಡೆಸಿದವು ಎಂದು ಪೊಲೀಸರು ತಿಳಿಸಿದ್ದಾರೆ.

ಭಯೋತ್ಪಾದಕರು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ನಾಗರಿಕರೊಬ್ಬರ ಹತ್ಯೆಯಾಗಿದೆ ಎಂದು ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ಹೇಳಿದ್ದಾರೆ.

ADVERTISEMENT

ದಕ್ಷಿಣ ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯ ಅಮ್ಸಿಪೋರಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.