ಪ್ರಾತಿನಿಧಿಕ ಚಿತ್ರ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಸಾಮಾಜಿಕ ಕಾರ್ಯಕರ್ತರೊಬ್ಬರನ್ನು ಭಯೋತ್ಪಾದಕ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ ಎಂದು ಅಧಿಕಾರಿಗಳು ಇಂದು (ಭಾನುವಾರ) ತಿಳಿಸಿದ್ದಾರೆ.
45 ವರ್ಷದ ಗುಲಾಮ್ ರಸೂಲ್ ಮಾಗ್ರೆ ಅವರ ನಿವಾಸಕ್ಕೆ ಶನಿವಾರ ತಡರಾತ್ರಿ ದಾಳಿ ನಡೆಸಿದ ಉಗ್ರ ಗುಂಡಿನ ದಾಳಿ ನಡೆಸಿದ್ದಾನೆ ಎಂದು ಅವರು ತಿಳಿಸಿದ್ದಾರೆ.
ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಿಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.
ದಾಳಿ ಹಿಂದಿನ ಕಾರಣ ತಿಳಿದು ಬಂದಿಲ್ಲ. ಉಗ್ರನನ್ನು ಮಟ್ಟ ಹಾಕಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.