
ಪಿಟಿಐ
ಜಮ್ಮು: ಜಮ್ಮು–ಕಾಶ್ಮೀರದ ಉಧಮ್‌ಪುರ ಜಿಲ್ಲೆಯಲ್ಲಿ ಭಯೋತ್ಪಾದಕರು ಮನೆಯೊಂದರಿಂದ ಆಹಾರವನ್ನು ತೆಗೆದುಕೊಂಡು ಹೋಗಿರುವುದಾಗಿ ಮಾಹಿತಿ ದೊರೆತ ಕಾರಣ ಭದ್ರತಾ ಪಡೆಗಳು ಶೋಧ ಕಾರ್ಯ ಆರಂಭಿಸಿವೆ.
ಮಜಾಲ್ತಾ ಪ್ರದೇಶದಲ್ಲಿನ ಚೋರ್ ಮೋಟು ಮತ್ತು ಅದರ ಸಮೀಪವಿರುವ ಅರಣ್ಯ ಗ್ರಾಮಗಳಲ್ಲಿ ಪೊಲೀಸರು ಮತ್ತು ಅರೆಸೇನಾ ಪಡೆಯವರು ಶೋಧ ನಡೆಸುತ್ತಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಇಬ್ಬರು ಭಯೋತ್ಪಾದಕರು ಶನಿವಾರ ಸಂಜೆ ಮನೆಯೊಂದಕ್ಕೆ ಬಂದು ಆಹಾರವಸ್ತುಗಳನ್ನು ಕೊಂಡುಹೋಗಿದ್ದಾರೆ ಎಂದು ಗುಪ್ತಚರ ಮಾಹಿತಿ ಬಂದಿತ್ತು.
ಮಜಾಲ್ತಾ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ಮತ್ತು ಭಯೋತ್ಪಾದಕರ ನಡುವೆ ಡಿಸೆಂಬರ್ 15ರಂದು ನಡೆದಿದ್ದ ಗುಂಡಿನ ಚಕಮಕಿಯಲ್ಲಿ ಪೊಲೀಸರೊಬ್ಬರು ಮೃತಪಟ್ಟಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.