ADVERTISEMENT

ಕಾಶ್ಮೀರದಲ್ಲಿ ಉಗ್ರರಿಂದ ಗ್ರೆನೇಡ್‌ ದಾಳಿ: ಇಬ್ಬರು ಪೊಲೀಸರಿಗೆ ಗಾಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ಮಾರ್ಚ್ 2022, 15:51 IST
Last Updated 23 ಮಾರ್ಚ್ 2022, 15:51 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಕಾಶ್ಮೀರದ ಶ್ರೀನಗರ ಜಿಲ್ಲೆಯ ರೈನಾವರಿ ಪ್ರದೇಶದಲ್ಲಿ ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ಗ್ರೆನೇಡ್‌ ಎಸೆದಿದ್ದಾರೆ ಎಂದು ಪೊಲೀಸರು ಬುಧವಾರ ಮಾಹಿತಿ ನೀಡಿದ್ದಾರೆ. ಈ ಕುರಿತು ಸುದ್ದಿಸಂಸ್ಥೆ ‘ಎಎನ್‌ಐ’ ಟ್ವೀಟಿಸಿದೆ.

ಉಗ್ರರು ನಡೆಸಿದ ಗ್ರೆನೇಡ್‌ ದಾಳಿಯಲ್ಲಿ ಇಬ್ಬರು ಪೊಲೀಸರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪ್ರದೇಶವನ್ನು ಸುತ್ತುವರಿದಿರುವ ಭದ್ರತಾ ಪಡೆಗಳು ಉಗ್ರರಿಗಾಗಿ ಶೋಧಕಾರ್ಯ ನಡೆಸುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿ ಬರಬೇಕಿದೆ...

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.