ADVERTISEMENT

ಕಾಶ್ಮೀರದಲ್ಲಿ ಗ್ರೆನೇಡ್ ದಾಳಿ: ಇಬ್ಬರು ವಲಸೆ ಕಾರ್ಮಿಕರಿಗೆ ಗಾಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಜೂನ್ 2022, 4:36 IST
Last Updated 4 ಜೂನ್ 2022, 4:36 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಶುಕ್ರವಾರ ಸಂಜೆ ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ಗ್ರೆನೇಡ್ ದಾಳಿಯಲ್ಲಿ ಇಬ್ಬರು ವಲಸೆ ಕಾರ್ಮಿಕರು ಗಾಯಗೊಂಡಿದ್ದಾರೆ. ಈ ಕುರಿತು ಕಾಶ್ಮೀರ ಪೊಲೀಸ್‌ ಇಲಾಖೆ ಟ್ವೀಟ್‌ ಮೂಲಕ ಮಾಹಿತಿ ನೀಡಿದೆ.

‘ಶೋಪಿಯಾನ್‌ ಜಿಲ್ಲೆಯ ಅಗ್ಲಾರ್ ಜೈನಾಪೋರಾದಲ್ಲಿ ಭಯೋತ್ಪಾದಕರು ಗ್ರೆನೇಡ್ ದಾಳಿ ನಡೆಸಿದ್ದಾರೆ. ಇದರ ಪರಿಣಾಮವಾಗಿ ಇಬ್ಬರು ವಲಸೆ ಕಾರ್ಮಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರಿದಿವೆ. ಹೆಚ್ಚಿನ ವಿವರಗಳನ್ನು ನೀಡಲಾಗುವುದು’ ಎಂದು ಪೊಲೀಸ್‌ ಇಲಾಖೆಯು ಟ್ವೀಟ್‌ನಲ್ಲಿ ತಿಳಿಸಿದೆ.

ಗಾಯಗೊಂಡ ಇಬ್ಬರು ಕಾರ್ಮಿಕರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

ಕಾಶ್ಮೀರದಲ್ಲಿ ಹತ್ಯೆಗಳು ಹೆಚ್ಚಾಗುತ್ತಿದ್ದು, ಕಳೆದ 26 ದಿನಗಳಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಕನಿಷ್ಠ 10 ಜನರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.