ADVERTISEMENT

ಜಮ್ಮು–ಕಾಶ್ಮೀರ: ಪುಲ್ವಾಮಾದಲ್ಲಿ ಮೂವರು ಉಗ್ರರ ಹತ್ಯೆ, ಯೋಧ ಹುತಾತ್ಮ

ಪಿಟಿಐ
Published 29 ಆಗಸ್ಟ್ 2020, 3:55 IST
Last Updated 29 ಆಗಸ್ಟ್ 2020, 3:55 IST
ಎಎನ್‌ಐ ಚಿತ್ರ
ಎಎನ್‌ಐ ಚಿತ್ರ   

ಶ್ರೀನಗರ: ಜಮ್ಮು–ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾಪಡೆಗಳು ಮತ್ತು ಉಗ್ರರ ನಡುವೆ ಶುಕ್ರವಾರ ತಡರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ.ಒಬ್ಬ ಯೋಧ ಹುತಾತ್ಮರಾಗಿದ್ದಾರೆ.

ಪುಲ್ವಾಮಾದ ಝಡೂರಾ ಪ್ರದೇಶದಲ್ಲಿ ರಾತ್ರಿ 1 ಗಂಟೆ ವೇಳೆಗೆ ಚಕಮಕಿ ನಡೆದಿದೆ. ಉಗ್ರರಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.

ಉಗ್ರರು ಅವಿತಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿವೆ. ಈ ವೇಳೆ ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಯೋಧರೂ ಪ್ರತಿ ದಾಳಿ ನಡೆಸಿದ್ದಾರೆ. ಈ ವೇಳೆ ಒಬ್ಬ ಯೋಧರ ಗಂಭೀರವಾಗಿ ಗಾಯಗೊಂಡಿದ್ದಾರೆ.ತಲೆಮರೆಸಿಕೊಂಡಿರುವ ಉಗ್ರರಿಗಾಗಿ ಶೋಧ ಕಾರ್ಯ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಗುಂಡಿನ ಚಕಮಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯೋಧ ಬಳಿಕ ಮೃತಪಟ್ಟಿದ್ದಾರೆ ಎಂದು ಶ್ರೀನಗರದ ರಕ್ಷಣಾ ವಕ್ತಾರ ಕರ್ನಲ್ ರಾಜೇಶ್ ಕಾಲಿಯಾ ತಿಳಿಸಿದ್ದಾರೆ.

ಶೋಪಿಯಾನ್‌ನ ಕಿಲೂರ ಪ್ರದೇಶದಲ್ಲಿಯೂ ಶುಕ್ರವಾರ ಇಬ್ಬರು ಅಪರಿಚಿತ ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ ಎಂದೂ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.