ADVERTISEMENT

ಕಾಶ್ಮೀರ: ರಾಜೋರಿಯಲ್ಲಿ ಬೆಂಕಿ ಅವಘಡ– ಇಬ್ಬರು ಯೋಧರು ಸಾವು

​ಪ್ರಜಾವಾಣಿ ವಾರ್ತೆ
Published 13 ಜನವರಿ 2022, 16:03 IST
Last Updated 13 ಜನವರಿ 2022, 16:03 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಶ್ರೀನಗರ: ರಾಜೋರಿ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಗುರುವಾರ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡದಲ್ಲಿ ಇಬ್ಬರು ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ.

‘ಗಡಿ ನಿಯಂತ್ರಣ ರೇಖೆಯ ರಾಜೋರಿ ಸೆಕ್ಟರ್‌ನ ಹಂಜನ್‌ವಾಲಿ ಪ್ರದೇಶದಲ್ಲಿ ನಡೆದ ಬೆಂಕಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಯೋಧರು ಸಾವನ್ನಪ್ಪಿದ್ದಾರೆ.‘ಘಟನಾ ನಂತರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು,ತನಿಖೆ ಕೈಗೊಂಡಿದ್ದಾರೆ. ಆಕಸ್ಮಿಕ ಬೆಂಕಿಯಿಂದ ಈ ದುರಂತ ಸಂಭವಿಸಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ’ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT