ADVERTISEMENT

ಜಮ್ಮು–ಕಾಶ್ಮೀರ: ಎನ್‌ಕೌಂಟರ್‌ಗೆ ಇಬ್ಬರು ಉಗ್ರರು ಬಲಿ

ಜಮ್ಮು–ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಸೇನಾ ಕಾರ್ಯಾಚರಣೆ

ಪಿಟಿಐ
Published 27 ಜೂನ್ 2022, 11:34 IST
Last Updated 27 ಜೂನ್ 2022, 11:34 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಜಮ್ಮು–ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಸೋಮವಾರ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನೌಪೊರಾ ಖೆರ್ಪೋರಾ ಪ್ರದೇಶದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆ ಶೋಧ ಕಾರ್ಯಾಚರಣೆ ಆರಂಭಿಸಿತ್ತು. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಉಗ್ರನ ಬಂಧನ: (ಜಮ್ಮು ವರದಿ) ಜಮ್ಮು–ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಉಗ್ರನೊಬ್ಬನನ್ನು ಬಂಧಿಸಿ, ಆತನ ಬಳಿ ಇದ್ದ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನುವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ADVERTISEMENT

ಬಂಧಿತನನ್ನು ದೋಡಾ ನಿವಾಸಿ ಫರೀದ್‌ ಅಹ್ಮದ್‌ ಎಂದು ಗುರುತಿಸಲಾಗಿದೆ. ಅಮರನಾಥ ಯಾತ್ರೆ ಹಿನ್ನೆಲೆಯಲ್ಲಿ ಚೆಕ್‌ಪೋಸ್ಟ್‌ಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಈ ವೇಳೆ ಪರಿಶೀಲನೆ ನಡೆಸಿದಾಗ ಫರೀದ್‌ ಬಳಿ ಚೀನೀಸ್ ಪಿಸ್ತೂಲ್‌ ಮತ್ತು ಸ್ಫೋಟಕಗಳಿರುವುದು ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.