ADVERTISEMENT

ಜಮ್ಮು–ಕಾಶ್ಮೀರ: ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

​ಪ್ರಜಾವಾಣಿ ವಾರ್ತೆ
Published 11 ಜುಲೈ 2022, 10:38 IST
Last Updated 11 ಜುಲೈ 2022, 10:38 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಜೈಶ್‌ ಎ ಮೊಹಮ್ಮದ್‌ (ಜೆಇಎಂ) ಉಗ್ರ ಸಂಘಟನೆಯ ಕಮಾಂಡರ್‌ ಕೈಸರ್‌ ಕೋಕಾ ಮತ್ತು ಆತನ ಸಹಚರನನ್ನು ಭದ್ರತಾ ಪಡೆಗಳು ಎನ್‌ಕೌಂಟರ್‌ನಲ್ಲಿ ಸೋಮವಾರ ಹತ್ಯೆ ಮಾಡಿದ್ದಾರೆ.

ಪುಲ್ವಾಮ ಜಿಲ್ಲೆಯಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ದಾಳಿ ನಡೆಯಿತು. ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು ಉಗ್ರರ ಅಡಗುತಾಣದ ಬಳಿ ಬಂದಾಗ, ಉಗ್ರರು ಗುಂಡಿನ ದಾಳಿ ನಡೆಸಿದರು. ಪ್ರತಿ ದಾಳಿಯಲ್ಲಿ ಉಗ್ರರನ್ನು ಹತ್ಯೆ ಮಾಡಲಾಗಿದೆಎಂದು ದಕ್ಷಿಣ ಕಾಶ್ಮೀರ ಪ್ರದೇಶದ ಪೊಲೀಸರು ಟ್ವೀಟ್‌ ಮಾಡಿದ್ದಾರೆ.

ಈ ವೇಳೆ ಒಂದು ಅಮೆರಿಕ ನಿರ್ಮಿತ ರೈಫೆಲ್‌, ಒಂದು ಪಿಸ್ತೂಲ್‌ ಸೇರಿದಂತೆ ಹಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

ADVERTISEMENT

ಭದ್ರತಾ ಪಡೆಗಳು ಮತ್ತು ಉಗ್ರರ ನಡುವಿನ ಗುಂಡಿನ ದಾಳಿಯಲ್ಲಿ ಈ ವರ್ಷ 120ಕ್ಕೂ ಹೆಚ್ಚು ಉಗ್ರರನ್ನು ಹತ್ಯೆ ಮಾಡಲಾಗಿದೆ. ಈ ಸಂಖ್ಯೆ ಕಳೆದ ವರ್ಷಕ್ಕಿಂತ ಹೆಚ್ಚಿದೆ ಎಂದು ಮಾಹಿತಿ ನೀಡಿದರು.

‘2018ರಿಂದ ದಕ್ಷಿಣ ಕಾಶ್ಮೀರ ಪ್ರದೇಶದಲ್ಲಿ ನಡೆದ ಹಲವು ಉಗ್ರ ಕೃತ್ಯಗಳಲ್ಲಿ ಕೋಕಾನ ಕೈವಾಡವಿತ್ತು’ ಎಂದು ಎಡಿಜಿಪಿ ವಿಜಯ್‌ ಕುಮಾರ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.